ರಾಜ್ಯದಲ್ಲೂ ಖಾಲಿ ಇರುವ ಲೈನ್‌ಮೆನ್ ಹುದ್ದೆಗಳ ಭರ್ತಿ ಮಾಡಲು ಇಲಾಖೆ ನಿರ್ಧರಿಸಿದ್ದು, ಹುದ್ದೆಗಳನ್ನು ಭರ್ತಿ ಮಾಡಲು ಸ್ವಲ್ಪ ದಿನಗಳಲ್ಲಿಯೇ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ತಿಳಿಸಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯು ಅಧಿಸೂಚನೆ ಹೊರಡಿಸಿದ ಬಳಿಕ ತಿಳಿದು ಬರುತ್ತದೆ.
ಕೆ.ಜೆ. ಜಾರ್ಜ್ ಅವರ ಹೇಳಿಕೆ ಏನು?: ಖಾಲಿ ಇರುವ ಲೈನ್‌ಮೆನ್ ಹುದ್ದೆಗಳ ಭರ್ತಿ ಮಾಡುವ ವಿಚಾರವಾಗಿ ಮಾತನಾಡಿದ ಕೆ.ಜೆ. ಜಾರ್ಜ್ ಅವರು 15 ದಿನಗಳಲ್ಲಿ ನೇಮಕಾತಿಯ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ. ಜೊತೆಗೆ ಲೈನ್‌ಮೆನ್ ಹುದ್ದೆಯ ನೇಮಕಾತಿಯ ರಾಜ್ಯಾದ್ಯಂತ ಒಂದೇ ಪ್ರಕ್ರಿಯೆ ನಡೆಯಲಿದ್ದು ಪಾರದರ್ಶಕತೆ ಇರಲಿ ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಾಗಿದೆ ಎಂದು ತಿಳಿಸಿದ್ದಾರೆ.
ಕೌಶಲ್ಯ ತರಬೇತಿ ನೀಡಲು ಕ್ರಮ :-
ಸ್ಥಳೀಯರಿಗೆ ಆದ್ಯತೆ ನೀಡುವ ಮತ್ತು 371 ಜೆ ಅಡಿಯಲ್ಲಿ ಮೀಸಲಿಟ್ಟ ಸ್ಥಾನಗಳನ್ನು ಭರ್ತಿ ಮಾಡುವ ಮೂಲಕ ವೈಟಿಪಿ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ನುರಿತ ಕೆಲಸಗಾರರ ಕೊರತೆಯಿಂದಾಗಿ ಸ್ಥಳೀಯ ನೇಮಕಾತಿ ನಿಧಾನಗೊಂಡ ಸಾಕಷ್ಟು ಗಮನಕ್ಕೆ ಬಂದಿದೆ. ಈ ಸಮಸ್ಯೆಯನ್ನು ಪರಿಹರಿಸಲು, ಅಗತ್ಯವಿರುವ ಸಂಖ್ಯೆಯ ಅಭ್ಯರ್ಥಿಗಳನ್ನು ಗುರುತಿಸಿ, ಅವರಿಗೆ ಕೆಪಿಸಿಎಲ್ ಮೂಲಕ ಅಗತ್ಯ ತರಬೇತಿ ನೀಡಲಾಗುವುದು. ರಾಜ್ಯದ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವುದರ ಜೊತೆಗೆ, ಅವರಿಗೆ ಆಯಾ ಉದ್ಯೋಗಗಳಿಗೆ ಅಗತ್ಯವಾದ ಕೌಶಲ್ಯಗಳನ್ನು ಒದಗಿಸಲು ನಮ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಇಂಡಿಯನ್ ಬ್ಯಾಂಕ್‌ನಲ್ಲಿ 1500 ಹುದ್ದೆಗಳಿಗೆ ಅರ್ಜಿ ಆಹ್ವಾನ. ಪದವಿಧರರಿಗೆ ಅವಕಾಶ.
ಹೆಚ್ಚಿನ ವಿದ್ಯುತ್ ಉತ್ಪಾದನಾ ದಾಖಲೆ :-
ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳಾದ ರಾಯಚೂರು ಉಷ್ಣ ವಿದ್ಯುತ್ ಸ್ಥಾವರ (ಆರ್‌ಟಿಪಿಎಸ್), ವಿದ್ಯುತ್ ಉತ್ಪಾದನಾ ಕೇಂದ್ರ (ವೈಟಿಪಿಎಸ್) ಮತ್ತು ಬೆಳಗಾವಿ ಉಷ್ಣ ವಿದ್ಯುತ್ ಸ್ಥಾವರ (ಬಿಟಿಪಿಎಸ್) ಈ ಬಾರಿ ದಾಖಲೆ ಪ್ರಮಾಣದ ವಿದ್ಯುತ್ ಉತ್ಪಾದನೆ ಮೂಲಕ ಕಳೆದ ವರ್ಷ ವಿದ್ಯುತ್ ಕೊರತೆಯನ್ನು ತಡೆಗಟ್ಟಲು ಸಹಾಯ ಮಾಡಿದೆ. ಈ ಅದ್ಭುತ ಸಾಧನೆಗೆ ಕಾರಣರಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಶ್ರಮವನ್ನು ಸಚಿವರು ಅವರು ಅಭಿನಂದಿಸಿದರು. ಜನವರಿಯಿಂದ ಮೇ ಅಂತ್ಯದವರೆಗೆ ಈ ಉಷ್ಣ ವಿದ್ಯುತ್ ಸ್ಥಾವರಗಳು ಪ್ರತಿದಿನ ಸರಾಸರಿ 200 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದಿಸುತ್ತವೆ.
ವಿಶೇಷವಾಗಿ ಏಪ್ರಿಲ್ ತಿಂಗಳಿನಲ್ಲಿ 2400 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆಯಾಗಿ ಇದು ದಾಖಲೆಯಾಗಿದೆ.ರಾಯಚೂರು ಉಷ್ಣ ವಿದ್ಯುತ್ ಸ್ಥಾವರ (ಆರ್‌ಟಿಪಿಎಸ್) ಈ ಬಾರಿ ವಿಶೇಷ ಸಾಧನೆ ಮಾಡಿದೆ. ನಿಗದಿತ ಗುರಿಗಿಂತ ಹೆಚ್ಚಿನ ವಿದ್ಯುತ್ ಉತ್ಪಾದಿಸುವ ಮೂಲಕ ರಾಜ್ಯಕ್ಕೆ ವಿದ್ಯುತ್ ನೀಡಲು ಸಹಾಯ ಮಾಡಿದೆ. 210 ಮೆಗಾವ್ಯಾಟ್ ಸಾಮರ್ಥ್ಯದ 3ನೇ ಘಟಕವು ಏಪ್ರಿಲ್ 4 ರಂದು 216 ಮೆಗಾವ್ಯಾಟ್ ವಿದ್ಯುತ್ ಸ್ಥಾಪಿಸಿದೆ. ತಾಂತ್ರಿಕ ಸವಾಲುಗಳ ನಡುವೆಯೂ, ಆರ್‌ಟಿಪಿಎಸ್‌ನ ಏಳು ಘಟಕಗಳು ಒಟ್ಟು ಶೇ.85 ವಿದ್ಯುತ್ ಉತ್ಪಾದನೆಯ ಮೂಲಕ ರಾಜ್ಯದ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಮಹತ್ವದ ಪಾತ್ರ ವಹಿಸಿವೆ.ಇದಲ್ಲದೆ, ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರ (ವೈಟಿಪಿಎಸ್) 2023-24 ಹಣಕಾಸು ವರ್ಷದಲ್ಲಿ 6229.250 ಮಿಲಿಯನ್ ಯುನಿಟ್ (ಮಿ.ಯು.) ವಿದ್ಯುತ್ ಉತ್ಪಾದಿಸುವ ಮೂಲಕ ಹೊಸ ದಾಖಲೆ ಬರೆದಿದೆ. ಇದು ವಿದ್ಯುತ್ ಕೇಂದ್ರ ಪ್ರಾಧಿಕಾರದ 6000 ಮಿ.ಯು. ಗುರಿ ಹೆಚ್ಚು. ಬಳ್ಳಾರಿ ಉಷ್ಣ ವಿದ್ಯುತ್ ಸ್ಥಾವರವು 8208.476 ಮಿ.ಯು. ವಿದ್ಯುತ್ ಉತ್ಪಾದಿಸುವ ಮೂಲಕ ಸ್ಥಾವರ ಸ್ಥಾಪನೆಯ ನಂತರದ ಅತ್ಯಧಿಕ ಉತ್ಪಾದನೆಯ ದಾಖಲೆಯನ್ನು ಹೊಂದಿದೆ.
ಇದನ್ನೂ ಓದಿ: ದ್ವಿತೀಯ ಪಿಯು ಪಾಸಾದವರಿಗೆ ಅಗ್ನಿವೀರ್ ವಾಯು ಹುದ್ದೆಗಳ ನೇಮಕಾತಿ ನಡೆಯುತ್ತಿದೆ.