ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಧಾರವಾಡ ಜಿಲ್ಲೆಯ ಅಂಗನವಾಡಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆಗಸ್ಟ್ ಮೊದಲ ವಾರದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು.ಆಸಕ್ತ ಅಭ್ಯರ್ಥಿಗಳು ಅರ್ಹತೆ ಮತ್ತು ಇತರ ಮಾಹಿತಿಗಾಗಿ ಪೂರ್ಣ ಲೇಖನ ಓದಿ.
ಖಾಲಿ ಇರುವ ಹುದ್ದೆ ಹಾಗೂ ಕೊನೆಯ ದಿನಾಂಕ :- ಧಾರವಾಡ ಜಿಲ್ಲೆಯ ಅಂಗನವಾಡಿ ಕೇಂದ್ರ ಕಾರ್ಯಕರ್ತರು ಮತ್ತು ಸಹಾಯಕರು ಸೇರಿದಂತೆ ಒಟ್ಟು 199 ಹುದ್ದೆಗಳನ್ನು ಭರ್ತಿ ಮಾಡಲು ಇಲಾಖೆ ಮುಂದಾಗಿದ್ದು ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 02 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಅಧಿಸೂಚನೆಯಲ್ಲಿ ಮಾಹಿತಿ ತಿಳಿಸಲಾಗಿದೆ.
ಹುದ್ದೆಯ ವಿವರ :- ಧಾರವಾಡದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ತನ್ನ ವ್ಯಾಪ್ತಿಯಲ್ಲಿರುವ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 9 ಕಾರ್ಯಕರ್ತೆಯರು ಮತ್ತು 190 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಮುನಾಗಿದೆ. ಅರ್ಜಿಯನ್ನೂ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ವೇತನವು ಸರ್ಕಾರದ ನಿಯಮಗಳ ಪ್ರಕಾರ ಇರುತ್ತದೆ.
ವಿದ್ಯಾರ್ಹತೆಯ ವಿವರ :-
ಧಾರವಾಡದ ಅಂಗನವಾಡಿಗಳಲ್ಲಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವವರು ಕನಿಷ್ಠ 8ನೇ ಅಥವಾ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರುವುದು ಕಡ್ಡಾಯ ಆಗಿದೆ. ಹಾಗೆಯೇ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವವರು SSLC ಅಥವಾ ಪಿಯುಸಿ ಅಥವಾ ಐಸಿಸಿ ಡಿಪ್ಲೊಮಾ, ಜೆಒಸಿ, ಎನ್‌ಟಿಟಿ ಕೋರ್ಸ್‌ಗಳಲ್ಲಿ ಯಾವುದಾದರೂ ಒಂದನ್ನು ಪೂರ್ಣಗೊಳಿಸಬೇಕು. ಇದರ ಜೊತೆಗೆ ಎಲ್ಲಾ ಅಭ್ಯರ್ಥಿಗಳು ಧಾರವಾಡ ಜಿಲ್ಲೆಯ ನಿವಾಸಿಗಳು ಆಗಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಯಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ವಯೋಮಿತಿ – ಧಾರವಾಡದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ನಿಯಮಗಳಿಗೆ ನಿಗದಿಪಡಿಸಿದ ವಯೋಮಿತಿಯನ್ನು ಹೊಂದಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 19 ರಿಂದ 35 ವರ್ಷ ಮತ್ತು ವಿವಿಧ ಜಾತಿಗಳ ಅಭ್ಯರ್ಥಿಗಳಿಗೆ ಅನ್ವಯವಾಗುವಂತೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
ವೇತನದ ವಿವರ :- ಧಾರವಾಡದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಸೂಚನೆಯ ಪ್ರಕಾರ, ಆಯ್ಕೆಯಾಗುವ ಅಂಗನವಾಡಿ ಕಾರ್ಯಕರ್ತರಿಗೆ ಮಾಸಿಕ 3000 ರಿಂದ 5000 ರೂ. ವರೆಗೆ ಮತ್ತು ಸಹಾಯಕರಿಗೆ 1800 ರಿಂದ 3400 ರೂ. ವರೆಗೆ ವೇತನ ನೀಡಲಾಗುವುದು. ದಾಖಲಾತಿಗಳ ಪರಿಶೀಲನೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ: BSNL ನ 91 ರೂಪಾಯಿ ಪ್ಲಾನ್ ಕೋಲಾಹಲವನ್ನು ಸೃಷ್ಟಿಸಿದೆ, ಬಳಕೆದಾರರಿಗೆ 90 ದಿನಗಳವರೆಗೂ ಮಾನ್ಯವಾಗಿರುತ್ತಾದೆ.
ಅರ್ಜಿ ಸಲ್ಲಿಸುವ ವಿಧಾನ:-
ಧಾರವಾಡದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು WCD ನೇಮಕಾತಿ ಅಧಿಕೃತ ವೆಬ್‌ಸೈಟ್ https://karnemakaone.kar.nic.in/abcd/home.aspx ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಬಳಿಕ ಪಡೆದ ಪ್ರಿಂಟ್ ಅನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು. ಅರ್ಜಿಯಲ್ಲಿ ಕೇಳಲಾಗಿರುವ ಅಗತ್ಯ ಮಾಹಿತಿ ಹಾಗೂ ದಾಖಲೆಗಳನ್ನು ನೀಡಬೇಕು.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು, ವೆಬ್‌ಸೈಟ್‌ನಲ್ಲಿ ಎಲ್ಲಾ ಸೂಚನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅನುಸರಿಸಿ. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕವನ್ನು ಗಮನಿಸಿ ದಿನಾಂಕದ ಒಳಗೆ ಅರ್ಜಿ ಸಲ್ಲಿಸಿ. ಅರ್ಜಿಯಲ್ಲಿ ನಿಮ್ಮ ಎಲ್ಲಾ ವೈಯಕ್ತಿಕ ಮಾಹಿತಿಯನ್ನು ಸರಿಯಾಗಿ ಮತ್ತು ಸಂಪೂರ್ಣವಾಗಿ ನಮೂದಿಸಿ.ಅರ್ಜಿಯನ್ನು ಸಲ್ಲಿಸುವ ಮೊದಲು ಎಲ್ಲಾ ಮಾಹಿತಿಯನ್ನು ಒಮ್ಮೆ ಪರಿಶೀಲಿಸಿ.