ರಾಜ್ಯದಲ್ಲಿ ಹೆಣ್ಣು ಮಕ್ಕಳ ಸಲುವಾಗಿಯೇ ಹಲವು ಯೋಜನೆಗಳು ಜಾರಿಯಲ್ಲಿ ಇವೆ. ಅದರಲ್ಲಿ ಪ್ರಮುಖವಾಗಿ ಗೃಹಲಕ್ಷ್ಮಿ ಯೋಜನೆ. ಈ ಯೋಜನೆಯಲ್ಲಿ ಈಗಾಗಲೇ ರಾಜ್ಯದ ಹಲವಾರು ಮಹಿಳೆಯರಿಗೆ 2,000 ರೂಪಾಯಿ ಹಣವು ಪ್ರತಿ ತಿಂಗಳು ಮಹಿಳೆಯ ಖಾತೆಗೆ ನೇರವಾಗಿ ಜಮಾ ಆಗುತ್ತಿದೆ. ಗೃಹಲಕ್ಷ್ಮಿ ಯೋಜನೆಯ ಜೊತೆಗೆ ಹೆಣ್ಣು ಮಕ್ಕಳ ಭವಿಷ್ಯಕ್ಕೆ ಭಾಗ್ಯಾಲಕ್ಷ್ಮಿ ಬಾಂಡ್ ಯೋಜನೆ ಇದೆ. ಈಗ ಈ ಬಗ್ಗೆ ಸಚಿವರು ಮಾಹಿತಿಯನ್ನು ನೀಡಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹೇಳಿಕೆ ಏನು?: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಭಾಗ್ಯಲಕ್ಷ್ಮಿ ಬಾಂಡ್ಗಳ ವಿತರಣೆ ನಿಲ್ಲುವುದಿಲ್ಲ ಎಂದು ಖಚಿತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಈ ಯೋಜನೆಯನ್ನು ರದ್ದುಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿ ಮಾತನಾಡಿದ ಸಚಿವೆ:- ಭಾನುವಾರ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ನಿರಂತರವಾಗಿ ನಡೆಯುತ್ತಿದೆ. ಯಾವುದೇ ಕಾರಣಕ್ಕೂ ಈ ಯೋಜನೆಯನ್ನು ರದ್ದುಗೊಳಿಸಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಬಿಗ್ ಅಪ್ಡೇಟ್ :-
ಮಹಿಳೆಯ ಖಾತೆಗೆ ಎರಡು ತಿಂಗಳಿಂದ ಗೃಹಲಕ್ಷ್ಮಿ ಹಣ ಜಮಾ ಆಗಲು ಸ್ವಲ್ಪ ವಿಳಂಬವಾಗುತ್ತಿರುವುದು ನಿಮಗೆ ಗೊತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು 3000 ಕೋಟಿ ರೂಪಾಯಿಗಳನ್ನು ವಿತರಿಸಲಾಗುತ್ತಿದೆ. ಇಷ್ಟೊಂದು ದೊಡ್ಡ ಮೊತ್ತದ ಹಣವನ್ನು ಖಾತೆಗೆ ಜಮಾ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಶೀಘ್ರದಲ್ಲೇ ಎಲ್ಲರ ಖಾತೆಗೆ ಜಮ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದರು. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಸದ್ಯದಲ್ಲಿಯೇ ಗೃಹಲಕ್ಷ್ಮಿ ಯೋಜನೆಯ ಹಣ ಜಮ ಆಗಲಿದೆ :- ಕರ್ನಾಟಕದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣ ಚುನಾವಣೆ ಸೇರಿದಂತೆ ವಿವಿಧ ಕಾರಣಗಳಿಂದ ಎರಡು ತಿಂಗಳಿಂದ ಫಲಾನುಭವಿಗಳ ಖಾತೆಗೆ ಜಮಾ ಆಗಿರಲಿಲ್ಲ. ಈ ವಿಳಂಬದಿಂದಾಗಿ ಫಲಾನುಭವಿಗಳು ಹಲವಾರು ಅನುಮಾನಗಳನ್ನು ವ್ಯಕ್ತಪಡಿಸಿದ್ದರು. ಆದರೆ ಸರ್ಕಾರ ಈ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಭರವಸೆ ನೀಡಿತ್ತು. ಈಗ ಸರ್ಕಾರದ ಭರವಸೆ ಅನುಸಾರವಾಗಿ ಗೃಹಲಕ್ಷ್ಮಿ ಯೋಜನೆಯಡಿ ಮೀಸಲಿಟ್ಟ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಭರವಸೆ ನೀಡಿದರು.
ಇದನ್ನೂ ಓದಿ: ನಿಮ್ಮ ಮಗಳು 21 ವರ್ಷಕ್ಕೆ 71 ಲಕ್ಷ ಪಡೆಯುತ್ತಾರೆ; ಸರ್ಕಾರದ ಈ ಯೋಜನೆ ಅದ್ಬುತ!
ಅಂಗನವಾಡಿಗೆ ಹೆಚ್ಚಿನ ಅನುದಾನ :-
ರಾಜ್ಯದ 18,800 ಅಂಗನವಾಡಿಗಳಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ಕೇಂದ್ರ ಸರ್ಕಾರ 170 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಈ ಹಣದ ಸಹಾಯದಿಂದ ಅಂಗನವಾಡಿಗಳಿಗೆ ಅಗತ್ಯವಾದ ಮೂಲ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು. ತಾಂತ್ರಿಕ ಸಮಸ್ಯೆಯಿಂದಾಗಿ ಗೃಹಲಕ್ಷ್ಮಿ ಯೋಜನೆಯ ಹಣ ಜೂನ್ ಮತ್ತು ಜುಲೈ ತಿಂಗಳಿಗೆ ಬಿಡುಗಡೆಯಾಗಿರಲಿಲ್ಲ. ಈಗ ಈ ಸಮಸ್ಯೆ ಬಗೆಹರಿದಿದ್ದು, ಒಂದು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಎರಡು ತಿಂಗಳ ಕಂತು ಎಂದರೆ ತಲಾ ನಾಲ್ಕು ಸಾವಿರ ರೂಪಾಯಿ ಇಂದು ಖಾತೆಗೆ ಜಮಾ ಆಗಲಿದೆ ಎಂದು ಈ ಹಿಂದೆ ಮಂಡ್ಯದಲ್ಲಿ ನಡೆದ ಸಭೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜನತೆ ಸ್ಪಷ್ಟ ಮಾಹಿತಿ ನೀಡಿದ್ದರು. ಈ ತಿಂಗಳ ಒಳಗಾಗಿ ಎಲ್ಲಾ ಫಲಾನುಭವಿಗಳಿಗೆ ಹಣ ಜಮಾ ಆಗುವ ನಿರೀಕ್ಷೆ ಇದೆ.
ಇದನ್ನೂ ಓದಿ: ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯಲು ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸುವ ಕ್ರಮ ಏನು ಎಂಬುದನ್ನು ತಿಳಿಯಿರಿ.