ರಾಜ್ಯ ಸರ್ಕಾರವು ಈಗ ಪರಿಶಿಷ್ಟ ಜಾತಿ ಪಂಗಡಗಳ ಜನರ ಅನುಕೂಲಕ್ಕೆ ಹಲವು ಯೋಜನೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಅರ್ಜಿ ಸಲ್ಲಿಸಬಹುದು. ಯಾವ ಯಾವ ಯೋಜನೆಗೆ ಅರ್ಜಿ ಆಹ್ವಾನ ಮಾಡಲಾಗಿದೆ ಎಂಬ ಮಾಹಿತಿ ಈ ಲೇಖನದಲ್ಲಿ ಲಭ್ಯವಿದೆ.
ಯಾವ ಯಾವ ಇಲಾಖೆಯು ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ?: ಪರಿಶಿಷ್ಟ ಜಾತಿಯವರ ಅನುಕೂಲಕ್ಕಾಗಿ ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಮಂಡಳಿ ಹಾಗೂ ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಭೋಗಿ ಅಭಿವೃದ್ಧಿ ನಿಗಮ ಹಾಗೂ ಕನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಗಳು ಹಲವು ಯೋಜನೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.
ಯಾವ ಯಾವ ಯೋಜನೆಗಳಿವೆ?
1) ಉದ್ಯಮ ಶೀಲತಾ ಯೋಜನೆ :- ಈ ಯೋಜನೆಯು ಬ್ಯಾಂಕ್ ನ ಸಹಕಾರದಿಂದ ನೀಡಲಾಗುತ್ತಿದೆ. ವ್ಯಾಪಾರ ಅಥವಾ ಉದ್ಯಮಗಳನ್ನು ಆರಂಭಿಸಲು ಘಟಕದ ವೆಚ್ಚಕ್ಕೆ ಶೇಕಡಾ 70% ಅಥವಾ ಎರಡು ಲಕ್ಷ ರೂಪಾಯಿಯ ವರೆಗೆ ಸಹಾಯಧನ ನೀಡಲಾಗುತ್ತದೆ. ಇದಕ್ಕೂ ಹೆಚ್ಚಿನ ಮೊತ್ತ ಬೇಕಾದರೆ ನೀವು ಬ್ಯಾಂಕ್ ನಲ್ಲಿ ಸಾಲಾ ಪಡೆಯಬಹುದು. ವಿರಾಜಪೇಟೆಯಲ್ಲಿ ಈಗಾಗಲೇ ಎರಡು ಯೋಜನೆಯನ್ನು ಯಶಸ್ವಿಯಾಗಿ ಪೂರೈಸಿಲಾಗಿದೆ.
2) ಗಂಗಾ ಕಲ್ಯಾಣ ಯೋಜನೆ :- ಈ ಯೋಜನೆಯನ್ನು ಕರ್ನಾಟಕ ರಾಜ್ಯ ಸರ್ಕಾರವು ಆರಂಭ ಮಾಡಿದೆ. ಇದು ಬರಗಾಲದ ಸಮಯದಲ್ಲಿ ರೈತರಿಗೆ ಬೋರ್ ಕೊರಸಲು ಸಹಾಯ ಮಾಡುತ್ತದೆ. ಇದು ಒಂದರಿಂದ ಐದು ಎಕರೆ ಜಾಗ ಹೊಂದಿರುವ ಅರ್ಹ ರೈತರಿಗೆ ಈ ಯೋಜನೆಯ ಲಾಭ ಸಿಗಲಿದೆ. ಈ ಯೋಜನೆಯಲ್ಲಿ ಫಲಾನುಭವಿಗಳಿಗೆ ಬೋರ್ ಬಾವಿ ಕೊರೆದು ಪಂಪ್ ಸೆಟ್ ಅಳವಡಿಕೆ ಮಾಡಿಕೊಳ್ಳಲು ಸಂಪೂರ್ಣ ಹಣವನ್ನು ನೀಡಲಿದೆ. ಅರ್ಹರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
3) ಮೈಕ್ರೋ ಕ್ರೆಡಿಟ್ ಯೋಜನೆ :- ಈ ಯೋಜನೆಯನ್ನು ಕರ್ನಾಟಕ ಅಭಿವೃದ್ಧಿ ನಿಗಮ ಆರಂಭಿಸಿದೆ. ಈ ಯೋಜನೆಯಲ್ಲಿ ನೋಂದಾಯಿತ ಮಹಿಳಾ ಸ್ವ ಸಹಾಯ ಸಂಘಗಳಿಗೆ ಸಾಲ ನೀಡುವ ಯೋಜನೆ ಇದಾಗಿದೆ. ನೋಂದಾಯಿತ 10 ಸದಸ್ಯರ ಸಂಘಕ್ಕೆ ಸಾಲ ಮತ್ತು ಸಹಾಯ ಧನ ಸಿಗಲಿದೆ. ಈ ಯೋಜನೆ ಮಹಿಳೆಯರ ಸ್ವ ಸಹಾಯ ಸಂಘದ ಸದಸ್ಯರಿಗೆ ಆರ್ಥಿಕ ಸಹಾಯ ನೀಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಆರಂಭಿಸಲಾಗಿದೆ.
4) ಟ್ಯಾಬ್ ವಿತರಣೆ :- ಈ ಯೋಜನೆಯನ್ನು ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲ ಆಗುವಂತೆ ಟ್ಯಾಬ್ ವಿತರಣೆ ಮಾಡಲು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ನಿಗಮವು ಆರಂಭಿಸಿದೆ. 8 ನೇ ತರಗತಿಯಿಂದ ಯಾವುದೇ ಪದವಿ ಅಥವಾ ಡಿಪ್ಲೊಮಾ ಅಥವಾ ITI ಓದುವ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ನೀಡಲಾಗುತ್ತದೆ. ಈ ಯೋಜನೆಗೆ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳೂ ಅರ್ಜಿ ಸಲ್ಲಿ ಸಲ್ಲಿಸಬಹುದು. ಇದರಿಂದ ಮಕ್ಕಳು ಆನ್ಲೈನ್ ಕ್ಲಾಸ್ ಗಳನ್ನೂ ಅಟೆಂಡ್ ಮಾಡಲು ಸಾಧ್ಯವಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 29 2024 ಕೊನೆಯ ದಿನ ಆಗಿದ್ದು ಅರ್ಜಿ ಸಲ್ಲಿಸಲು ಬಯಸುವವರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ 08272- 228857 ಗೆ ಕರೆಮಾಡಿ ಮಾಹಿತಿ ಪಡೆಯಬಹುದು ಎಂದು ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ಸಂಸ್ಥಾಪಕ ಚಂದ್ರಪ್ಪ ಅವರು ತಿಳಿಸಿದ್ದಾರೆ. ಇದು ಪರಿಶಿಷ್ಟ ಜಾತಿಯ ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಮೋದಿ ಸರ್ಕಾರದ ಹೊಸ ಯೋಜನೆಯಲ್ಲಿ ಮಹಿಳೆಯರಿಗೆ ಸಿಗಲಿದೆ ಬರೋಬ್ಬರಿ 11 ಸಾವಿರ ರೂಪಾಯಿ.
ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಕೇಂದ್ರ ಸರ್ಕಾರದಿಂದ 3 ಲಕ್ಷದವರೆಗೆ ಸಿಗಲಿದೆ ಸಾಲ ಸೌಲಭ್ಯ..