ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತ ವಸತಿ ನೀಡುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯು 2024-25 ನೇ ಸಾಲಿನಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು ಇಲಾಖೆ ಕೋರಿದೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಪಟ್ಟಿ :-
- ಪ್ರವರ್ಗ 1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಮತ್ತು ಇತರ ಜನಾಂಗಗಳಿಗೆ ಸೇರಿದ ಮೆಟ್ರಿಕ್ ನಂತರದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮಾತ್ರ ಅರ್ಜಿ ಸಲ್ಲಿಸಬಹುದು.
- ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯವು ನಿಯಮದ ಪ್ರಕಾರ ಪ್ರ.ವರ್ಗ 1 ಹಾಗೂ ಎಸ್ಸಿ ಮತ್ತು ಎಸ್ಟಿ ವರ್ಗದವರಿಗೆ ವಾರ್ಷಿಕ ಆದಾಯದ ಮಿತಿ 2.50 ಲಕ್ಷ ರೂಪಾಯಿ ಆಗಿರುತ್ತದೆ. ಹಾಗೂ ಪ್ರವರ್ಗ 2ಎ ಮತ್ತು 2ಬಿ ಮತ್ತು 3ಎ ಮತ್ತು 3ಬಿ ಮತ್ತು ಇತರ ಹಿಂದುಳಿದ ವರ್ಗ ವಾರ್ಷಿಕ ಆದಾಯದ ಮಿತಿ 1 ಲಕ್ಷ ರೂಪಾಯಿ ಆಗಿರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
- ವೆಬ್ಸೈಟ್ ಗೆ ಭೇಟಿನೀಡಿ :- ನೀವು ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ ಭೇಟಿ ನೀಡಬೇಕು.
- ಅರ್ಜಿ ಭರ್ತಿ ಮಾಡಿ :- ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ನಿಮ್ಮ ವೈಯಕ್ತಿಕ ವಿವರಗಳು ಹಾಗೂ ಆದಾಯದ ಮಾಹಿತಿ ಹಾಗೂ ಶಿಕ್ಷಣದ ಮಾಹಿತಿ ಎಲ್ಲವನ್ನೂ ಭರ್ತಿ ಮಾಡಿ ಕೆಳಗಿರುವ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
- ಅರ್ಜಿ ಸಲ್ಲಿಸಿ :- ನೀವು ಸಲ್ಲಿಸಿರುವ ಎಲ್ಲ ಮಾಹಿತಿಗಳು ಸರಿಯಾಗಿ ಇವೆಯೇ ಎಂದು ಇನ್ನೊಮ್ಮೆ ಪರಿಶೀಲಿಸಿ ಅರ್ಜಿ ಸಲ್ಲಿಸಿ. ಅಧಿಸೂಚನೆ PDF ಡೌನ್ ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :- ವಿದ್ಯಾರ್ಥಿ ನಿಲಯಗಳ ಬಗ್ಗೆ ಯಾವುದೇ ಮಾಹಿತಿಗಳು ಇಲಾಖೆಯ ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ ಭೇಟಿ ನೀಡಿ ಅಥವಾ ಉಪ ನಿರ್ದೇಶಕರ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ವಿ.ವಿ.ಗೋಪುರ, ಡಾ.ಬಿ.ಆರ್ ಅಂಬೇಡ್ಕರ್ ವೀದಿ, ಬೆಂಗಳೂರು ನಗರ ಜಿಲ್ಲೆಗೆ ಭೇಟಿ ನೀಡಿ ಮಾಹಿತಿ ಪಡೆಯಿರಿ. ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 080-50770004 , 080-50770005. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: NSP ವಿದ್ಯಾರ್ಥಿವೇತನ 2024 ಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎಂದು ನೋಡೋಣ.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ :-
ಅರ್ಜಿ ನಮೂನೆಯನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗಾಗಿ ಹೆಚ್.ಎಂ.ಐ.ಎಸ್ (HMIS) ಪೋರ್ಟಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ :-
- ಅರ್ಜಿ ಸಲ್ಲಿಸಲು ಅರ್ಜಿ ನಮೂನೆಯನ್ನು ಅಧಿಕೃತ ವೆಬ್ ಸೈಟ್ www.sw.kar.nic.in ನಿಂದ ಅರ್ಜಿ ಡೌನ್ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅದರ ನೀಡಬೇಕಾದ ದಾಖಲೆಗಳನ್ನು ಯಾವುದೇ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಕ್ಕೆ ಸಲ್ಲಿಸಿ.
ಹೆಚ್ಚಿನ ಮಾಹಿತಿಗೆ :- ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ನಗರ ಜಿಲ್ಲೆ, ನಂ. 21/1, 1ನೇ ಮಹಡಿ, ಜೆಲ್ಲೇಟಾ ಟವರ್, ಮಿಷನ್ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು ಇವರನ್ನು ಸಂಪರ್ಕಿಸಿ ಇಲ್ಲವೇ ದೂರವಾಣಿ ಸಂಖ್ಯೆ 080-22240449, 9480843019 ಗೆ ಕರೆಮಾಡಿ ಹೆಚ್ಚಿನ ಮಾಹಿತಿ ಪಡೆಯಿರಿ.
ಇದನ್ನೂ ಓದಿ: ಭಾರತೀಯ ವಾಯುಪಡೆಯಲ್ಲಿ ‘ಅಗ್ನಿವೀರ್ ವಾಯು’ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಿ.