ಹಾವೇರಿ ಜಿಲ್ಲೆಯ SSLC ಆಗಿರುವ ಯುವಕ ಯುವತಿಯರಿಗೆ ಇದು ನಿಜಕ್ಕೂ ಶುಭಸುದ್ದಿ. ಹಾವೇರಿ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು.
ಹುದ್ದೆಯ ಬಗ್ಗೆ ಮಾಹಿತಿ ಇಲ್ಲಿದೆ :- ಹಾವೇರಿ ಜಿಲ್ಲಾ ನ್ಯಾಯಾಂಗ ಘಟಕವು 26 ಜವಾನ (ಪೀವನ್) ಹುದ್ದೆಯ ನೇಮಕತಿಗೆ ಅರ್ಜಿ ಆಹ್ವಾನಿಸಿದೆ. ಹಾವೇರಿ ಜಿಲ್ಲಾ ನ್ಯಾಯಾಲಯ, ಅಧೀನದ ನ್ಯಾಯಾಲಯಗಳಲ್ಲಿ ಉದ್ಯೋಗ ಮಾಡಲು ಇಚ್ಛೆ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಶೈಕ್ಷಣಿಕ ಅರ್ಹತೆಯ ಮಾಹಿತಿ :-
- ಮಾನ್ಯತೆ ಪಡೆದ ಮಂಡಳಿಯಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಆಗಿರಬೇಕು.
- ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಓದಲು ಹಾಗೂ ಬರೆಯಲು ಮತ್ತು ಭಾಷೆಯನ್ನು ಮಾತನಾಡಲು ಬರಬೇಕು.
- ಅಭ್ಯರ್ಥಿ ದೈಹಿಕವಾಗಿ ಸದೃಢವಾಗಿರಬೇಕು.
ವಯಸ್ಸಿನ ಅರ್ಹತೆಯ ಬಗ್ಗೆ ಮಾಹಿತಿ
- ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ 18 ವರ್ಷ ಹಾಗೂ ಗರಿಷ್ಠ ವರ್ಷ 35 ಆಗಿರಬೇಕು.
- ಸರ್ಕಾರದ ಮೀಸಲಾತಿ ನಿಯಮದ ಪ್ರಕಾರ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ 5 ವರ್ಷಗಳ ವಯಸ್ಸಿನ ಸಡಿಲಿಕೆ ಇರುತ್ತದೆ ಹಾಗೂ ಇತರ ಹಿಂದುಳಿದ ವರ್ಗಗಳ (OBC) ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ 3 ವರ್ಷಗಳ ವಯಸ್ಸಿನ ಸಡಿಲಿಕೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಶುಲ್ಕ ವಿವರಗಳು :-
- ಸಾಮಾನ್ಯ ವರ್ಗದ ಅಭ್ಯರ್ಥಿಗಳು 200 ರೂಪಾಯಿ ಅರ್ಜಿ ಶುಲ್ಕ ನೀಡಬೇಕು.
- ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 100 ರೂಪಾಯಿ ಅರ್ಜಿ ಶುಲ್ಕ ನೀಡಬೇಕು.
- ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳು ಶುಲ್ಕ ನೀಡಬೇಕಾಗಿಲ್ಲ.
ಆಯ್ಕೆ ವಿಧಾನ :-
A) ಅರ್ಹತಾ ಪರೀಕ್ಷೆ:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕನ್ನಡ ಓದಲು ಮತ್ತು ಬರೆಯಲು ಬರುತ್ತದೆಯೋ ಇಲ್ಲವೋ ಎಂಬುದನ್ನು ತಿಳಿಯಲು ಒಂದು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ.
- ಈ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಶ್ರೇಣೀಕರಿಸಲಾಗುತ್ತದೆ.
- ಒಂದು ಹುದ್ದೆಗೆ 10 ಅಭ್ಯರ್ಥಿಗಳಂತೆ 1:10 ರ ಅನುಪಾತದಲ್ಲಿ ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ.
B) ಸಂದರ್ಶನ:
- ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ ಮತ್ತು ಅಭ್ಯರ್ಥಿಯ ಸಾಮಾನ್ಯ ಜ್ಞಾನ, ವ್ಯಕ್ತಿತ್ವ ಮತ್ತು ಹುದ್ದೆಗೆ ಸಂಬಂಧಿಸಿದ ಕೌಶಲ್ಯಗಳನ್ನು ಮೌಲ್ಯಮಾಪನ ಮಾಡುತ್ತದೆ.
C) ಆಯ್ಕೆ :-
- ಅರ್ಹತಾ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :-
- ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ ಭೇಟಿ ನೀಡಿ.
- ನಂತರ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ ಎಂಬ ಬಟನ್ ಕ್ಲಿಕ್ ಮಾಡಿ.
- ಆನ್ಲೈನ್ ಅರ್ಜಿ ಫಾರ್ಮ್ ನಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಖಚಿತವಾಗಿ ಮತ್ತು ಸಂಪೂರ್ಣವಾಗಿ ಭರ್ತಿ ಮಾಡಿ.
- SSLC ಅಂಕಪಟ್ಟಿ , ಆಧಾರ್ ಕಾರ್ಡ್ , ಜಾತಿ ಪ್ರಮಾಣಪತ್ರ ,ಮೀಸಲಾತಿ ಕೋರುವ ದಾಖಲೆಗಳುಗಳನ್ನೂ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು. ಎಲ್ಲಾ ಮಾಹಿತಿಯನ್ನು ಖಚಿತಪಡಿಸಿಕೊಂಡ ನಂತರ, ‘ಅರ್ಜಿ ಸಲ್ಲಿಸಿ’ ಬಟನ್ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು ಹೀಗೇವೆ :- ಅರ್ಜಿ ಸಲ್ಲಿಸಲು 03/07/ 2024 ರಿಂದ 01/ 08/ 2024 ರ ವರೆಗೆ ಅವಕಾಶ ಇರುತ್ತದೆ.
ಅಧಿಸೂಚನೆ PDF ಡೌನ್ ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಭಾರತೀಯ ವಾಯುಪಡೆಯಲ್ಲಿ ‘ಅಗ್ನಿವೀರ್ ವಾಯು’ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಿ.