ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ. ಈಗಾಗ್ಲೇ ಸ್ಟೆನೋಗ್ರಾಫರ್ ಗ್ರೇಡ್ ಸಿ ಹಾಗೂ ಡಿ ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಿ ಖಾಲಿ ಇರುವ ಒಟ್ಟು 2006 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಇಲಾಖೆಯು ಅಧಿಸೂಚನೆಯನ್ನು ಪ್ರಕಟ ಗೊಳಿಸಿದೆ. ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸುವ ಅರ್ಹತೆ ಹಾಗೂ ಕೊನೆಯ ದಿನಾಂಕದ ಮಾಹಿತಿಗಳನ್ನು ಈ ಲೇಖನದಲ್ಲಿ ತಿಳಿಯಿರಿ.
ಹುದ್ದೆಗಳ ಬಗ್ಗೆ ಮಾಹಿತಿ :- ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಖಾಲಿ ಹುದ್ದೆಗಳ ನೇಮಕಾತಿಯ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ಒಟ್ಟು 2006 ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳ ಭರ್ತಿ ಮಾಡುವುದಾಗಿ ತಿಳಿಸಿದೆ. ಈ ಹುದ್ದೆಗಳ ಕೇಂದ್ರ ಸರ್ಕಾರದ ವಿವಿಧ ಇಲಾಖೆ ಹಾಗೂ ಸಚಿವಾಲಯ ಹಾಗೂ ಕಚೇರಿ ಮತ್ತು ವಿವಿಧ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಾಗಿವೆ.
ಅರ್ಜಿ ದಾರರ ವಯಸ್ಸಿನ ಮಿತಿಯ ಬಗ್ಗೆ ಮಾಹಿತಿ :- ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಹೀಗಿದೆ.
- ಸ್ಟೆನೋಗ್ರಾಫರ್ ಗ್ರೂಪ್ ‘ಸಿ’ ಹುದ್ದೆಗಳಿಗೆ ಅರ್ಜಿ ಹಾಕಲು ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು ಹಾಗೂ ಗರಿಷ್ಠ ವಯಸ್ಸು 30 ಆಗಿರಬೇಕು ಎಂದು ತಿಳಿಸಿದೆ.
- ಸ್ಟೆನೋಗ್ರಾಫರ್ ಗ್ರೂಪ್ ‘ಡಿ’ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯಸು 18 ವರ್ಷ ಆಗಿರಬೇಕು ಹಾಗೂ ಗರಿಷ್ಠ ವಯಸ್ಸು 27 ವರ್ಷ ಇರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಯಲಾಗಿದೆ.
ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಿದ್ಯಾರ್ಹತೆ ಏನಿರಬೇಕು?: ಇಲಾಖೆಯ ಅಧಿಸೂಚನೆಯ ಪ್ರಕಾರವಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಿದ್ಯಾರ್ಹತೆ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಇರಬೇಕು. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಶುಲ್ಕದ ವಿವರಗಳು :-
- ಅರ್ಜಿ ಸಲ್ಲಿಸುವ ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವು 100 ರೂಪಾಯಿ ಆಗಿರುತ್ತದೆ.
- ಎಸ್‌ಸಿ ಹಾಗೂ ಎಸ್‌ಟಿ ಹಾಗೂ ಮಹಿಳಾ ಹಾಗೂ ಮಾಜಿ ಸೈನಿಕ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿ ಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಅರ್ಜಿ ಶುಲ್ಕವನ್ನು ಅರ್ಜಿದಾರರು ಆನ್‌ಲೈನ್ ಮೂಲಕ ಸಹ ಪಾವತಿಸಬಹುದು ಎಂದು ತಿಳಿಸಿದ್ದಾರೆ.
ಎಸ್‌ಎಸ್‌ಸಿ ಸ್ಟೆನೋಗ್ರಾಫರ್ ಹುದ್ದೆಯ ನೇಮಕಾತಿ ಪ್ರಕ್ರಿಯೆ ಹೇಗಿರುತ್ತದೆ?: ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ನಂತರ ಸ್ಕಿಲ್ ಟೆಸ್ಟ್ ನಡೆಸಲಾಗಿತದೆ. ಈ ಎರಡು ಪರೀಕ್ಷೆಗಳಲ್ಲಿ ಅಂಕಗಳ ಆಧಾರದ ಮೇಲೆ ಹಾಗೂ ಮೂಲ ದಾಖಲೆಗಳನ್ನು ಪರಿಶೀಲನೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.
ಪರೀಕ್ಷೆ ಹೇಗಿರುತ್ತದೆ?: ಅಭ್ಯರ್ಥಿಗಳಿಗೆ ಸಿಬಿಟಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಒಟ್ಟು 200 ಅಂಕಗಳಿಗೆ 200 ಪ್ರಶ್ನೆಗಳ ಒಳಗೊಂಡ ಪಶ್ನೆ ಪತ್ರಿಕೆ ಇರುತ್ತದೆ. ಪ್ರಶ್ನೆ ಪತ್ರಿಕೆಯಲ್ಲಿ ಪ್ರಶ್ನೆಗಳನ್ನು ಜೆನೆರಲ್ ಇಂಟೆಲಿಜೆನ್ಸ್ ಹಾಗೂ ರೀಸನಿಂಗ್ ಹಾಗೂ ಜೆನೆರಲ್ ಅವಾರ್ನೆಸ್ ಹಾಗೂ ಇಂಗ್ಲಿಷ್ ಹಾಗೂ ರೀಡಿಂಗ್ ಕಂಪ್ರೆಹೆನ್ಷನ್ ಎಂದು ಒಟ್ಟು 3 ವಿಭಾಗಗಳಲ್ಲಿ ಪ್ರಶ್ನೆ ಪತ್ರಿಕೆ ಇರುತ್ತದೆ.
ಇದನ್ನೂ ಓದಿ: ಡಿಪ್ಲೊಮಾ, ಪದವೀಧರರಿಗೆ ಭಾರತೀಯ ರೈಲ್ವೆ ಇಲಾಖೆಯಲ್ಲಿ 7,934 ಹುದ್ದೆಗಳ ನೇಮಕಾತಿ.
ಮುಖ್ಯ ದಿನಾಂಕಗಳು :-
-
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು 26-07-2024 ರಿಂದ 17-08-2024 ರ ರಾತ್ರಿ 11 ಗಂಟೆವರೆಗೆ ಅವಕಾಶ ನೀಡಲಾಗಿದೆ.
- ಆನ್‌ಲೈನ್ ಮೂಲಕ ಅಪ್ಲಿಕೇಶನ್ ಶುಲ್ಕ 18-08-2024 ರ ರಾತ್ರಿ 11 ಗಂಟೆವರೆಗೆ ಸಮಯದ ಅವಕಾಶ ಇರುತ್ತದೆ.
- ಅರ್ಜಿ ಮಾಹಿತಿ ಹಾಗೂ ಅರ್ಜಿ ಶುಲ್ಕ ಮಾಹಿತಿ ತಿದ್ದುಪಡಿಗೆ 27-08-2024 ರಿಂದ 28-08-2024 ರವರೆಗೆ ಅವಕಾಶ ಇವೆ.
- ಕಂಪ್ಯೂಟರ್ ಆಧಾರಿತ ಪರೀಕ್ಷೆಯು ಬಹುಶಃ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ನಡೆಯುತ್ತದೆ.
ಅಧಿಸೂಚನೆ PDF ಡೌನ್ ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ನೀವು BSNL ಗೆ ನಿಮ್ಮ ಸಿಮ್ ಪೋರ್ಟ್ ಮಾಡಿಸಬೇಕಾ? ಹಾಗಾದರೆ ನೀವು ಮನೆಯಲ್ಲಿಯೇ ಕುಳಿತು ಸರಳ ವಿಧಾನ ಅನುಸರಿಸಿ