ಡಿಸೆಂಬರ್ ಒಳಗೆ ಬರೋಬ್ಬರಿ 13,591 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಸಿಎಂ ಸೂಚನೆ.

ರಾಜ್ಯದಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ನೇಮಕಾತಿಯಲ್ಲಿ ಇದೆ ಬರುವ ಡಿಸೆಂಬರ್ ತಿಂಗಳ ಒಳಗಾಗಿ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಸಭೆಯಲ್ಲಿ ತಿಳಿಸಿದ್ದಾರೆ. ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮನವಿಯನ್ನು ಪಡೆದರು.

WhatsApp Group Join Now
Telegram Group Join Now

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ :- ನಗರ ಪ್ರದೇಶದಲ್ಲಿ ಅಂಗನವಾಡಿ ಸಹಾಯಕಿಯರ ಸರಕಾರವು ನೀಡುವ ಗೌರವ ಧನದ ಮೊತ್ತವನ್ನು ಹೆಚ್ಚಳ ಮಾಡಬೇಕು ಎಂದು ಪ್ರಸ್ತಾವನೆ ಸಲ್ಲಿಸಲಾಗಿದೆ.

ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಿಎಂ ಸೂಚನೆ :- ಸಿಎಂ ಸಿದ್ದರಾಮಯ್ಯ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಈಗಾಗ್ಲೇ ರಾಜ್ಯದಲ್ಲಿ ಹಲವು ಕಡೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆ ಖಾಲಿ ಇದೆ. ಇದರಿಂದ ರಾಜ್ಯದಲ್ಲಿ ಮಕ್ಕಳಿಗೆ ಸರಿಯಾದ ಶಿಕ್ಷಣ ಹಾಗೂ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಸಿಗುವ ಪೌಷ್ಟಿಕ ಆಹಾರಗಳ ಸರಬರಾಜು ಸರಿಯಾದ ಸಮಯದಲ್ಲಿ ಸರಿಯಾದ ರೀತಿಯಲ್ಲಿ ಆಗುತ್ತಿಲ್ಲ. ಆದ್ದರಿಂದ ರಾಜ್ಯದಲ್ಲಿ ಖಾಲಿ ಇರುವ 4180 ಅಂಗನವಾಡಿ ಕಾರ್ಯಕರ್ತೆ ಹುದ್ದೆ ಹಾಗೂ 9411 ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಮುಂದಿನ ಡಿಸೆಂಬರ್ ಅಂತ್ಯದ ಒಳಗಾಗಿ ಭರ್ತಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಬಾಲ ತಾಯಂದಿರ ಪ್ರಕರಣಗಳಿಗೆ ಕ್ರಮ ಕೈಗೊಳ್ಳಬೇಕು:-

ರಾಜ್ಯದಲ್ಲಿ ಕಡಿಮೆ ವಯಸ್ಸಿನಲ್ಲಿ ಮದುವೆ ಆಗಿ ಗರ್ಭಿಣಿ ಆಗುವ ಮಹಿಳೆಯರ ಸಂಖ್ಯೆಯು ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಿದೆ. ಇದನ್ನು ಗಮನಿಸಿದ ಸಿಎಂ ಸಿದ್ಧರಾಮಯ್ಯ ಅವರು ಇಂತಹ ಪ್ರಕರಣವು ಕಂಡು ಬಂದಾಗ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ರಾಜ್ಯದಲ್ಲಿ 2022-23 ನೇ ಇಸವಿಯಲ್ಲಿ 13477 ಬಾಲ ಗರ್ಭಿಣಿಯರ ಸಂಖ್ಯೆ ಪತ್ತೆ ಆಗಿದೆ. ಇದನ್ನು ತಡೆಗಟ್ಟಲು ಅಧಿಕಾರಿಗಳು ಸರಿಯಾದ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಬಾಲ್ಯ ವಿವಾಹ ತಡೆಗೆ ಕ್ರಮ :- ಈಗಲೂ ಸಹ ಬಾಲ್ಯ ವಿವಾಹಗಳು ನಡೆಯುತ್ತಿದ್ದು ಇದನ್ನು ತಡೆಗಟ್ಟಬೇಕು. ಪ್ರತಿ ಜಿಲ್ಲೆಯಲ್ಲೂ ಬಾಲ್ಯ ವಿವರ ಮೇಲ್ವಿಚಾರಣಾ ಸಮಿತಿ ರಚಿಸಬೇಕು. ಇದರ ಜೊತೆಗೆ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಕಾವಲು ಸಮಿತಿಯನ್ನು ರಚನೆ ಮಾಡಿ ಬಾಲ್ಯ ವಿವಾಹವನ್ನು ತಡೆಗಟ್ಟಬೇಕು. ಬಾಲ್ಯ ವಿವಾಹವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ವಿವಿಧ ಯೋಜನೆಗಳ ಅಡಿಯಲ್ಲಿ ಅನುದಾನ ನೀಡುತ್ತಿದ್ದೆ. ಅದನ್ನು ಪಡೆಯಬೇಕು. ಬಾಲ್ಯ ವಿವಾಹಗಳು ತಡೆಯದಂತೆ ಹೆಚ್ಚಿನ ನಿಗಾ ವಹಿಸುವುದು ಸಮಿತಿಗಳ ಕರ್ತವ್ಯ ಆಗಿರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ತಿಳಿಸಿದರು.

ಇದನ್ನೂ ಓದಿ: ಗರ್ಭಿಣಿ ಮಹಿಳೆಯರಿಗೆ ಬ್ಯಾಂಕ್ ಖಾತೆಗೆ 5000 ಹಣ ಜಮೆ ಮಾಡಲಿದೆ ಕೇಂದ್ರ ಸರ್ಕಾರ! ಈ ರೀತಿ ಅರ್ಜಿ ಸಲ್ಲಿಸಿ 

CSR ನೆರವಿನಲ್ಲಿ ಮಾದರಿ ಶಾಲೆಗಳ ನಿರ್ಮಾಣ ಆರಂಭ ಆಗಲಿದೆ:-

ರಾಜ್ಯದಲ್ಲಿ ಒಟ್ಟು 2000 ಪಂಚಾಯಿತಿ ವ್ಯಾಪ್ತಿಯಲ್ಲಿ ಮಾದರಿ ಶಾಲೆಗಳ ನಿರ್ಮಾಣ ಆಗಲಿದೆ. ಇದಕ್ಕೆ ಕಳೆದ ಸಾಲಿನಲ್ಲಿ ಖಾಸಗಿ ಕಂಪನಿಗಳ ಕಾಯಿದೆಯ ಪ್ರಕಾರ 8163 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಬೇಕಿತ್ತು. ಆದರೆ ಈ ಅವಧಿಯಲ್ಲಿ ಖಾಸಗಿ ಶಾಲೆಗಳು ಹೆಚ್ಚಿಬಲಭವನ್ನು ಗಳಿಸಿದೆ. ಇದರಿಂದ ರಾಜ್ಯದಲ್ಲಿ 500 ಸ್ಥಳಗಳನ್ನು ಗುರುತಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 2000 ಶಾಲೆಗಳನ್ನು ನಿರ್ಮಾಣ ಮಾಡುವ ಗುರಿಯನ್ನು ಸರಕಾರವು ಹೊಂದಿದೆ. ಕೆಲವು ಉತ್ತಮ ಖಾಸಗಿ ಶಾಲೆಗಳಿಗೆ ಸರಕಾರಿ ಶಾಲೆಗಳನ್ನು ದತ್ತು ಪಡೆಯಲು ಸೂಚನೆ ನೀಡಲಾಗಿದೆ. ಯಾವ ಮಗುವೂ ಶಿಕ್ಷಣದಿಂದ ವಂಚನೆ ಅನುಭವಿಸಬಾರದು ಎಂಬುದು ಸರಕಾರದ ಉದ್ದೇಶ ಆಗಿದೆ.

ಇದನ್ನೂ ಓದಿ: PM ವಿಶ್ವಕರ್ಮ ಯೋಜನೆಯಡಿಯಲ್ಲಿ ಉಚಿತವಾಗಿ ಸಿಗುತ್ತೆ ಹೊಲಿಗೆ ಮಿಷನ್! ಈ ರೀತಿ ಅರ್ಜಿ ಸಲ್ಲಿಸಿ.

Sharing Is Caring:

Leave a Comment