ಅನ್ನಭಾಗ್ಯ ಯೋಜನೆಯ ಮಹತ್ವದ ಬದಲಾವಣೆ ಮಾಡಿದೆ ಸರ್ಕಾರ. ಇನ್ನು ಮುಂದೆ ನಿಮಗೆ ಅಕ್ಕಿ ಹಣ ಸಿಗುವುದಿಲ್ಲ

ಅನ್ನಭಾಗ್ಯ ಕರ್ನಾಟಕ ಸರ್ಕಾರದಿಂದ ಸಾಮಾಜಿಕವಾಗಿ ಒಂದು ಅತ್ಯಂತ ಜನಪ್ರಿಯ ಮತ್ತು ಪ್ರಮುಖ ಭದ್ರತಾ ಯೋಜನೆಯಾಗಿದೆ. ಈ ಯೋಜನೆಯ ಮುಖ್ಯ ಉದ್ದೇಶ ಕುಟುಂಬ ರಾಜ್ಯದ ಬಡ ಕುಟುಂಬಗಳಿಗೆ ಅಗತ್ಯವಾದ ಆಹಾರ ಧಾನ್ಯವನ್ನು ಅಥವಾ ಕಡಿಮೆ ಬೆಲೆಗೆ ನೀಡಲಾಗುತ್ತದೆ. ರಾಜ್ಯ ಸರಕಾರ ಚುನಾವಣೆಯ ಒಳಗೆ 10 k.g. ಅಕ್ಕಿಯನ್ನು ನೀಡುವುದಾಗಿ ಭರವಸೆ ನೀಡಿದ್ದರು. ಇಲ್ಲಿಯ ವರೆಗೆ ಕೇಂದ್ರ ಸರಕಾರದ ಅಕ್ಕಿಯ ಜೊತೆಗೆ ಉಳಿದ 5 k.g. ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡುತ್ತಿತ್ತು. ಆದರೆ ಈಗ ಆ ಹಣ ನಿಮ್ಮ ಖಾತೆಗೆ ಬರುವುದಿಲ್ಲ ಎಂದು ಮಾಹಿತಿ ತಿಳಿಸಿದೆ.

WhatsApp Group Join Now
Telegram Group Join Now

ಮುನಿಯಪ್ಪ ಅವರ ಹೇಳಿಕೆ ಹೀಗಿದೆ :- ಅನ್ನಭಾಗ್ಯ ಯೋಜನೆಯಲ್ಲಿ ಬದಲಾವಣೆ ಮಾಡಲು ಸರ್ಕಾರ ಯೋಜಿಸುತ್ತಿದೆ. ಬಡತನ ರೇಖೆಯ ಕೆಳಗಿರುವವರಿಗೆ ನಗದು ಅಥವಾ ಅಕ್ಕಿ ಬದಲಿಗೆ ಬೆಳೆಕಾಳು, ಸಕ್ಕರೆ ಅಥವಾ ಅಡುಗೆ ಎಣ್ಣೆಯನ್ನು ವಿತರಿಸುವ ಯೋಜನೆ ಇದೆ ಎಂದು ಮುನಿಯಪ್ಪ ಹೇಳಿದ್ದಾರೆ. ಪ್ರಸ್ತುತ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಹಣ ನೀಡಲಾಗುತ್ತಿದೆ. ಆದರೆ ಇತ್ತೀಚಿನ ಸಮೀಕ್ಷೆಯ ಪ್ರಕಾರ ಶೇಕಡಾ 93ರಷ್ಟು ಬಿಪಿಎಲ್ ಕಾರ್ಡ್ ಹೊಂದಿರುವವರು ಬೇಳೆಕಾಳುಗಳು, ಸಕ್ಕರೆ ಅಥವಾ ಅಡುಗೆ ಎಣ್ಣೆಯನ್ನು ಪಡೆಯಲು ಬಯಸುತ್ತಾರೆ. ಆದ್ದರಿಂದ ಈ ವಿಷಯವನ್ನು ಅಧಿಕಾರಿಗಳೊಂದಿಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚಿಸುತ್ತಿದ್ದಾರೆ” ಎಂದು ಅವರು ಹೇಳಿದರು.

ಕೇಂದ್ರದಿಂದ ಹೆಚ್ಚುವರಿ ಅಕ್ಕಿ ವಿತರಣೆಗೆ ಭರವಸೆ :-

ಕೇಂದ್ರ ಆಹಾರ ಸಚಿವ ಪ್ರಲ್ಲಾದ್ ಜೋಶಿ ಅವರನ್ನು ಭೇಟಿ ಮಾಡಿದ ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ಅವರು, ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಅಕ್ಕಿ ವಿತರಣೆಗಾಗಿ ಅನುದಾನವನ್ನು ಕೇಂದ್ರ ಸರ್ಕಾರವು ಅಕ್ಕಿ ಒದಗಿಸುವ ಭರವಸೆ ನೀಡಿದೆ. ಜೊತೆಗೆ, ಕೇಂದ್ರ ಸರ್ಕಾರದ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿ ವ್ಯಕ್ತಿಗೆ ಅನ್ನಭಾಗ್ಯ ಯೋಜನೆ ಅಕ್ಕಿ ವಿತರಣೆಯಾಗಿದೆ. 5 ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿದೆ, ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿಯನ್ನು ವಿತರಿಸಲಾಗುತ್ತಿದೆ ಎಂದು ಅವರು ಹೇಳಿದರು. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ನಿಮ್ಮ ಹೂಡಿಕೆಯ ಹಣ ಡಬಲ್ ಆಗಬೇಕು ಎಂದರೆ ನೀವು ಪೋಸ್ಟ್ ಆಫೀಸ್ ನಾ ಈ ಯೋಜನೆಯಲ್ಲಿ ಹೂಡಿಕೆ ಮಾಡಲೇಬೇಕು.

ಯೋಜನೆ ಉದ್ದೇಶಗಳು:-

  • ಆಹಾರ ಭದ್ರತೆ: ರಾಜ್ಯದ ಎಲ್ಲಾ ಕುಟುಂಬಗಳಿಗೆ ಆಹಾರ ಭದ್ರತೆ ಒದಗಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
  • ಪೌಷ್ಟಿಕ ಆಹಾರ: ಕುಟುಂಬಗಳಿಗೆ ಪೌಷ್ಟಿಕ ಆಹಾರ ಒದಗಿಸುವ ಮೂಲಕ ಆರೋಗ್ಯವನ್ನು ಸುಧಾರಿಸುತ್ತದೆ.
  • ಬಡತನ ನಿರ್ಮೂಲನೆ: ಬಡತನವನ್ನು ಕಡಿಮೆ ಮಾಡುವಲ್ಲಿ ಮತ್ತು ಜನರ ಜೀವನವನ್ನು ಸುಧಾರಿಸುವಲ್ಲಿ ಈ ಯೋಜನೆ ಪ್ರಮುಖ ಪಾತ್ರ ವಹಿಸುತ್ತದೆ.
  • ಸಾರ್ವಜನಿಕ ವಿತರಣಾ ವ್ಯವಸ್ಥೆಯ ಬಲವರ್ಧನೆ: ಸಾರ್ವಜನಿಕ ವಿತರಣಾ ವ್ಯವಸ್ಥೆ ಅಳವಡಿಸುವ ಮೂಲಕ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸುವುದು.

ಯೋಜನೆಯ ಪ್ರಯೋಜನಗಳು

  • ಆಹಾರ ಭದ್ರತೆ: ಕುಟುಂಬಗಳಿಗೆ ನಿರಂತರ ಆಹಾರ ಭದ್ರತೆ.
  • ಆರೋಗ್ಯ ಸುಧಾರಣೆ: ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯ ಸುಧಾರಿಸುತ್ತದೆ.
  • ಬಡತನ ಕಡಿಮೆ : ಕಡು ಬಡವರಿಗೆ ಬಡತನವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  • ಸಾಮಾಜಿಕ ಸಮಾನತೆ: ಸಮಾಜದಲ್ಲಿ ಆಹಾರ ಸಂಬಂಧಿ ಅಸಮಾನತೆಯನ್ನು ಕಡಿಮೆ ಮಾಡುತ್ತದೆ.

ಒಟ್ಟಾರೆಯಾಗಿ, ಅನ್ನಭಾಗ್ಯ ಯೋಜನೆ ಕರ್ನಾಟಕದ ಬಡ ಮತ್ತು ಅತಿ ಬಡ ಕುಟುಂಬಗಳಲ್ಲಿ ಗಮನಾರ್ಹ ಬದಲಾವಣೆ ತಂದಿದೆ. ಈ ಯೋಜನೆಯು ರಾಜ್ಯದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ.ಆಹಾರ ಧಾನ್ಯವನ್ನು ಸಾರ್ವಜನಿಕ ವಿತರಣಾ ಅಂಗಡಿಗಳ ಮೂಲಕ ವಿತರಿಸಲಾಗುತ್ತದೆ.ಆಯಾ ಗ್ರಾಮ ಪಂಚಾಯತಿ ಅಥವಾ ನಗರಸಭೆಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಬಹುದು.

ಇದನ್ನೂ ಓದಿ: LPG ಸಿಲಿಂಡರ್ ಖರೀದಿಯ ಮೇಲೆ ಭಾರಿ ರಿಯಾಯಿತಿ; ಇಲ್ಲಿದೆ ಸಂಪೂರ್ಣ ಮಾಹಿತಿ. 

Sharing Is Caring:

Leave a Comment