ರಾಜ್ಯ ಸರ್ಕಾರದಿಂದ ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಿಗೆ ಉಚಿತ NEET ತರಬೇತಿ..

ಪ್ರತಿ ತಂದೆ ತಾಯಿಗೆ ಮಗುವಿಗೆ ಉತ್ತಮ ಶಿಕ್ಷಣ ನೀಡಬೇಕು ಎಂಬ ಆಸೆ ಕನಸು ಇದ್ದೆ ಇರುತ್ತದೆ. ಆದರೆ ಇಂದಿನ ಕಾನ್ವೆಂಟ್ ಶಾಲೆಗಳಲ್ಲಿ ಉತ್ತಮ ಶಿಕ್ಷಣ ಸಿಕ್ಕಿದರೂ ಅಲ್ಲಿ ತಮ್ಮ ಮಕ್ಕಳನ್ನು ಓದಿಸಲು ಹಣದ ತೊಂದರೆಗಳು ಇರುತ್ತೆ. ಆದರೆ ಕಾನ್ವೆಂಟ್ ಶಾಲೆಗಳಿಗಿಂತ ಉತ್ತಮ ಶಿಕ್ಷಣ ನೀಡಬೇಕು ಎಂದು ರಾಜ್ಯ ಸರ್ಕಾರವು ವಿವಿಧ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಈಗ ಉಚಿತ ನೀಟ್ ಪರೀಕ್ಷೆ ತರಬೇತಿ ನೀಡಲು ನಿರ್ಧರಿಸಿದೆ.

WhatsApp Group Join Now
Telegram Group Join Now

ಮೊದಲ ಹಂತದಲ್ಲಿ 20 ಸಾವಿರ ಜನರಿಗೆ ನೀಟ್ ಪರೀಕ್ಷೆ ತರಬೇತಿ :- ಮೊದಲ ಹಂತದಲ್ಲಿ ರಾಜ್ಯ ಸರ್ಕಾರವು ಸರಕಾರಿ ಶಾಲೆಯಲ್ಲಿ ಓದಿರುವ 20 ಸಾವಿರ ಜನರಿಗೆ ನೀಟ್ ಪರೀಕ್ಷೆ ತರಬೇತಿ ನೀಡಲು ನಿರ್ಧರಿಸಿದೆ.

ಈ ಯೋಜನೆ ಯಾವಾಗಿನಿಂದ ಜಾರಿಗೆ ಬರಲಿದೆ :- ಮೊದಲ ಹಂತದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದ 20 ಸಾವಿರ ಉಚಿತ ನೀಟ್ ತರಬೇತಿ ನೀಡಲಲಾಗುವುದು ಅದು ಬರುವ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರಲಿದೆ ಎಂದು ಶಿಕ್ಷಣ ಸಚಿವರು ತಿಳಿಸಿದರು. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಅಭಿನಂದನಾ ಕಾರ್ಯಕ್ರಮ ದಲ್ಲಿ ಮಾತನಾಡಿದ ಮಧು ಬಂಗಾರಪ್ಪ :-

ಮಧು ಬಂಗಾರಪ್ಪ ಅವರು ಗುರುವಾರ ಶಿವಮೊಗ್ಗ ನಗರದ ಅಂಬೇಡ್ಕ‌ರ್ ಭವನದಲ್ಲಿ 2022-23 ನೇ ಸಾಲಿನಲ್ಲಿ ಅತಿ ಹೆಚ್ಚು ಅಂಕ ಪಡೆದ SSLC ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡಿದರು ಬಳಿಕ 2023-24 ನೇ ಸಾಲಿನ SSLC ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ನೀಡಿದ ಶಾಲೆಗಳಿಗೆ ಏರ್ಪಡಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ನಂತರ ಮಾತನಾಡಿ ಶಿಥಿಲಾ ಅವಸ್ಥೆಗೆ ಬಂದಿರುವ ಸರಕಾರಿ ಶಾಲಾ ಕಟ್ಟಡಗಳಿಗೆ ಒಂದು ಹೊಸ ಉಸಿರು ನೀಡುವ ಪ್ರಯತ್ನದಲ್ಲಿ, ಸರ್ಕಾರವು ಹಂತ-ಹಂತವಾಗಿ ದುರಸ್ತಿ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.

ಈ ಯೋಜನೆಡಿ, 1600 ಕ್ಕೂ ಹೆಚ್ಚು ಶಾಲಾ ಕೊಠಡಿಗಳನ್ನು ದುರಸ್ತಿ ಮಾಡಲಾಗಿದೆ ಮತ್ತು ಕಡೆಗಳಲ್ಲಿ ಹೊಸ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಇದಲ್ಲದೆ, ರಾಜ್ಯಾದ್ಯಂತ 500 ಹೊಸ ಕೆಪಿಎಸ್ ಶಾಲೆಗಳನ್ನು ಸ್ಥಾಪಿಸುವ ಮೂಲಕ ಶಿಕ್ಷಣದ ಪ್ರವೇಶಾವಕಾಶವನ್ನು ವಿಸ್ತರಿಸಲಾಗಿದೆ.ಕರ್ನಾಟಕ ಸರ್ಕಾರವು ಶಿಕ್ಷಣ ಕ್ಷೇತ್ರದ ಭವಿಷ್ಯವನ್ನು ಉನ್ನತೀಕರಿಸಲು ಬದ್ಧವಾಗಿದೆ. ಈ ದಿನ, ರಾಜ್ಯಾದ್ಯಂತ 500 ರಿಂದ 1000 ಹೊಸ ಕೆಪಿಎಸ್ ಶಾಲೆಗಳನ್ನು ಸ್ಥಾಪಿಸುವ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಶೈಕ್ಷಣಿಕ ಅವಕಾಶಗಳನ್ನು ವಿಸ್ತರಿಸುವ ಗುರಿಯನ್ನು ಹೊಂದಲಾಗಿದೆ. ಈ ಶಾಲೆಗಳು ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮ ಶಿಕ್ಷಣ, ಎಲ್ಕೆಜಿ ಮತ್ತು ಯುಕೆಜಿ ತರಗತಿಗಳು, ಉತ್ತಮ ಗ್ರಂಥಾಲಯಗಳು ಮತ್ತು ಇತರ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.

ಇದನ್ನೂ ಓದಿ: ಡಿಸೆಂಬರ್ ಒಳಗೆ ಬರೋಬ್ಬರಿ 13,591 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಸಿಎಂ ಸೂಚನೆ.

ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಮಧು ಬಂಗಾರಪ್ಪ:- 

ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳ ನೇಮಕಾತಿಯಲ್ಲಿ ಹಂತ ಹಂತವಾಗಿ ನೇಮಕ ಮಾಡಲಾಗುವುದು. ಈಗಾಗಲೇ ರಾಜ್ಯ ಸರ್ಕಾರವು ಈ ವರ್ಷ ಸುಮಾರು 10 ಸಾವಿರ ಸರ್ಕಾರಿ ಶಿಕ್ಷಕರ ನೇಮಕ ಮಾಡಿಕೊಳ್ಳುವದರ ಹಿತೇವೆ ರಾಜ್ಯದ ಸರಕಾರಿ ಅನುದಾನಿತ ಶಾಲೆಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಪ್ರಯತ್ನಿಸುತ್ತಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು. ಜೊತೆಗೆ ನೆಟ್ ಪರೀಕ್ಷೆ ಗೆ ಮಕ್ಕಳಿಗೆ ಅಗತ್ಯ ತರಬೇತಿ ಹಾಗೂ ಮೂಲ ಸೌಕರ್ಯವನ್ನು ನೀಡಲು ರಾಜ್ಯ ಸರ್ಕಾರವು ಮುದಾಗಿದೆ. ಮುಂಬರುವ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡಲಾಗುವುದು.

ಇದನ್ನೂ ಓದಿ: ಸ್ವಂತ ಉದ್ಯೋಗ ಮಾಡುವವರಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಒಂದು ಲಕ್ಷ ರೂಪಾಯಿ ಸಾಲ ಸೌಲಭ್ಯ.

Sharing Is Caring:

Leave a Comment