ಸರ್ಕಾರಿ ಹುದ್ದೆಗಳಲ್ಲಿ ಕೆಲಸ ಮಾಡಬೇಕು ಎಂಬ ಆಸೆ ಇರುವವರಿಗೆ ಈಗ ಹಾಸನದಲ್ಲಿ ಖಾಲಿ ಹುದ್ದೆಗಳ ಭರ್ತಿ ನಡೆಯುತ್ತಿದೆ. ಹಾಸನ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ 734 ಹುದ್ದೆಗಳು ಖಾಲಿ ಇವೆ. ಎಸ್‌ಎಸ್‌ಎಲ್‌ಸಿ ಅಥವಾ ಪಿಯುಸಿ ಪಾಸಾದವರು ಅರ್ಜಿ ಹಾಕಬಹುದು. ಈ ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿಗೆ ಈ ಲೇಖನವನ್ನು ಸಂಪೂರ್ಣ ಓದಿ.
ಹುದ್ದೆಯ ಬಗ್ಗೆ ಮಾಹಿತಿ:- ಹಾಸನ ಜಿಲ್ಲೆಯ ಒಟ್ಟು 8 ತಾಲೂಕುಗಳ ಅಂಗನವಾಡಿಗಳಲ್ಲಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಮಹಿಳೆಯರು ಮತ್ತು ಅಲ್ಪಸಂಖ್ಯಾತರ ಗೌರವ ಸೇವೆಯ ಆಧಾರದ ಮೇಲೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. 168 ಅಂಗನವಾಡಿ ಕಾರ್ಯಕರ್ತೆ ಮತ್ತು 566 ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು, ಹುದ್ದೆಗಳಿಗೆ ಅರ್ಜಿ ಹಾಕಲು ಸೆಪ್ಟೆಂಬರ್ 4 ಕೊನೆಯ ದಿನ ಆಗಿರುತ್ತದೆ.
ಹಾಸನ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳು ಖಾಲಿ ಇವೆ.
- ಹಾಸನ ತಾಲ್ಲೂಕಿನಲ್ಲಿ 17 ಅಂಗನವಾಡಿ ಕಾರ್ಯಕರ್ತೆ ಮತ್ತು 74 ಸಹಾಯಕಿಯರ ಹುದ್ದೆಗಳು ಖಾಲಿ ಇವೆ.
- ಚನ್ನರಾಯಪಟ್ಟಣ ತಾಲೂಕಿನಲ್ಲಿ 39 ಅಂಗನವಾಡಿ ಕಾರ್ಯಕರ್ತೆ ಮತ್ತು 103 ಸಹಾಯಕಿಯರ ಹುದ್ದೆಗಳು ಖಾಲಿ ಇವೆ.
- ಹೊಳೆನರಸೀಪುರ ತಾಲೂಕಿನಲ್ಲಿ 27 ಅಂಗನವಾಡಿ ಕಾರ್ಯಕರ್ತೆ ಮತ್ತು 61 ಸಹಾಯಕಿಯರ ಹುದ್ದೆಗಳು ಖಾಲಿ ಇವೆ.
- ಬೇಲೂರು ತಾಲ್ಲೂಕಿನಲ್ಲಿ 7 ಅಂಗನವಾಡಿ ಕಾರ್ಯಕರ್ತೆಯರು ಮತ್ತು 82 ಸಹಾಯಕಿಯರ ಹುದ್ದೆಗಳು ಖಾಲಿ ಇವೆ.
- ಸಕಲೇಶಪುರ ತಾಲೂಕಿನಲ್ಲಿ 15 ಅಂಗನವಾಡಿ ಕಾರ್ಯಕರ್ತೆಯರು ಮತ್ತು 46 ಸಹಾಯಕಿಯರ ಹುದ್ದೆಗಳು ಖಾಲಿ ಇವೆ.
- ಆಲೂರು ತಾಲ್ಲೂಕಿನಲ್ಲಿ 1 ಅಂಗನವಾಡಿ ಕಾರ್ಯಕರ್ತೆ ಮತ್ತು 24 ಸಹಾಯಕಿಯರ ಹುದ್ದೆಗಳು ಖಾಲಿ ಇವೆ.
- ಅರಸೀಕೆರೆ ತಾಲ್ಲೂಕಿನಲ್ಲಿ 45 ಅಂಗನವಾಡಿ ಕಾರ್ಯಕರ್ತೆಯರು ಮತ್ತು 126 ಸಹಾಯಕಿಯರ ಹುದ್ದೆಗಳು ಖಾಲಿ ಇವೆ.
- ಅರಕಲಗೂಡು ತಾಲ್ಲೂಕಿನಲ್ಲಿ17 ಅಂಗನವಾಡಿ ಕಾರ್ಯಕರ್ತೆಯರು ಮತ್ತು 50 ಸಹಾಯಕಿಯರ ಹುದ್ದೆಗಳು ಖಾಲಿ ಇವೆ.
ವಯಸ್ಸಿನ ಮಿತಿ :- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷ ಹಾಗೂ ಗರಿಷ್ಠ ವಯಸ್ಸು 35. ಆದರೆ, ಇತರ ಹಿಂದುಳಿದ ವರ್ಗದವರಿಗೆ 3 ವರ್ಷ ಮತ್ತು ಎಸ್‌ಸಿ/ ಎಸ್‌ಟಿ/ ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ವಯಸ್ಸಿನಲ್ಲಿ ಸಡಿಲಿಕೆ ಇದೆ.
ವಿದ್ಯಾರ್ಹತೆ :- ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 12ನೇ ಅಥವಾ ಡಿಪ್ಲೊಮಾ ಇಸಿಸಿಇ ಅಗತ್ಯ. ಸಹಾಯಕಿ ಹುದ್ದೆಗೆ 10ನೇ ಪಾಸಾದವರು ಅರ್ಜಿ ಹಾಕಬಹುದು. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: LPG ಸಿಲಿಂಡರ್ ಖರೀದಿಯ ಮೇಲೆ ಭಾರಿ ರಿಯಾಯಿತಿ; ಇಲ್ಲಿದೆ ಸಂಪೂರ್ಣ ಮಾಹಿತಿ.
ಅರ್ಜಿ ಹಾಕುವ ವಿಧಾನ :-
ಅರ್ಜಿ ಸಲ್ಲಿಸಲು ಮೊದಲು ಇಲ್ಲಿ ಕ್ಲಿಕ್ ಮಾಡಿ ಈ ವೆಬ್‌ಸೈಟ್‌ಗೆ ಭೇಟಿ ನೀಡಿ. ನಂತರ ಹಾಸನ ಜಿಲ್ಲೆ, ಶಿಶು ಅಭಿವೃದ್ಧಿ ಯೋಜನೆ ಮತ್ತು ಅಧಿಸೂಚನೆ ಸಂಖ್ಯೆಯನ್ನು ಆಯ್ಕೆ ಮಾಡಿ. ಕೊನೆಯಲ್ಲಿ ನೀವು ಅರ್ಜಿ ಸಲ್ಲಿಸಲು ಬಯಸುವ ಅಂಗನವಾಡಿ ಕೇಂದ್ರವನ್ನು ಆಯ್ಕೆ ಮಾಡಿ ಮತ್ತು ಅರ್ಜಿಯನ್ನು ಪೂರ್ಣಗೊಳಿಸಿ.
ನೀಡಬೇಕಾದ ದಾಖಲೆಗಳು :-
- ಎಸ್‌ಎಸ್‌ಎಲ್‌ಸಿ ಅಥವಾ ಪಿಯುಸಿ ಅಂಕಪಟ್ಟಿ.
- ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ
- ವೈಯಕ್ತಿಕ ಮಾಹಿತಿ
- ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
- ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.
- ಜಾತಿ ಪ್ರಮಾಣ ಪತ್ರ.
- ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿ ನಿರ್ದಿರುವ ಪ್ರಮಾಣ ಪತ್ರ.
- ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ.
- ವಿಚ್ಛೇದಿತ ಪ್ರಮಾಣ ಪತ್ರ ಇದ್ದಲ್ಲಿ
- ವಾಸಸ್ಥಳ ದೃಢೀಕರಣ ಪತ್ರ
ಇದನ್ನೂ ಓದಿ: ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಈಗಲೇ ಅರ್ಜಿ ಸಲ್ಲಿಸಿ; ಕರ್ನಾಟಕದಲ್ಲೂ ಇದೆ ಕೆಲಸ