ಹಾವೇರಿ ನ್ಯಾಯಾಂಗ ಘಟಕದಲ್ಲಿ SSLC ಪಾಸಾದ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ.

ಹಾವೇರಿ ಜಿಲ್ಲೆಯ SSLC ಆಗಿರುವ ಯುವಕ ಯುವತಿಯರಿಗೆ ಇದು ನಿಜಕ್ಕೂ ಶುಭಸುದ್ದಿ. ಹಾವೇರಿ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

ಹುದ್ದೆಯ ಬಗ್ಗೆ ಮಾಹಿತಿ ಇಲ್ಲಿದೆ :- ಹಾವೇರಿ ಜಿಲ್ಲಾ ನ್ಯಾಯಾಂಗ ಘಟಕವು 26 ಜವಾನ (ಪೀವನ್) ಹುದ್ದೆಯ ನೇಮಕತಿಗೆ ಅರ್ಜಿ ಆಹ್ವಾನಿಸಿದೆ. ಹಾವೇರಿ ಜಿಲ್ಲಾ ನ್ಯಾಯಾಲಯ, ಅಧೀನದ ನ್ಯಾಯಾಲಯಗಳಲ್ಲಿ ಉದ್ಯೋಗ ಮಾಡಲು ಇಚ್ಛೆ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಶೈಕ್ಷಣಿಕ ಅರ್ಹತೆಯ ಮಾಹಿತಿ :-

  • ಮಾನ್ಯತೆ ಪಡೆದ ಮಂಡಳಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಆಗಿರಬೇಕು.
  • ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಓದಲು ಹಾಗೂ ಬರೆಯಲು ಮತ್ತು ಭಾಷೆಯನ್ನು ಮಾತನಾಡಲು ಬರಬೇಕು.
  • ಅಭ್ಯರ್ಥಿ ದೈಹಿಕವಾಗಿ ಸದೃಢವಾಗಿರಬೇಕು.

ವಯಸ್ಸಿನ ಅರ್ಹತೆಯ ಬಗ್ಗೆ ಮಾಹಿತಿ

  • ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ 18 ವರ್ಷ ಹಾಗೂ ಗರಿಷ್ಠ ವರ್ಷ 35 ಆಗಿರಬೇಕು.
  • ಸರ್ಕಾರದ ಮೀಸಲಾತಿ ನಿಯಮದ ಪ್ರಕಾರ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ 5 ವರ್ಷಗಳ ವಯಸ್ಸಿನ ಸಡಿಲಿಕೆ ಇರುತ್ತದೆ ಹಾಗೂ ಇತರ ಹಿಂದುಳಿದ ವರ್ಗಗಳ (OBC) ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ 3 ವರ್ಷಗಳ ವಯಸ್ಸಿನ ಸಡಿಲಿಕೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ನಲ್ಲಿ ಬರೋಬ್ಬರಿ 2700 ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಆಸಕ್ತ ಪದವೀಧರರು ಈಗಲೇ ಅರ್ಜಿ ಸಲ್ಲಿಸಿ.

ಅರ್ಜಿ ಶುಲ್ಕ ವಿವರಗಳು :-

  • ಸಾಮಾನ್ಯ ವರ್ಗದ ಅಭ್ಯರ್ಥಿಗಳು 200 ರೂಪಾಯಿ ಅರ್ಜಿ ಶುಲ್ಕ ನೀಡಬೇಕು.
  • ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 100 ರೂಪಾಯಿ ಅರ್ಜಿ ಶುಲ್ಕ ನೀಡಬೇಕು.
  • ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳು ಶುಲ್ಕ ನೀಡಬೇಕಾಗಿಲ್ಲ.

ಆಯ್ಕೆ ವಿಧಾನ :-

A) ಅರ್ಹತಾ ಪರೀಕ್ಷೆ:

  1. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕನ್ನಡ ಓದಲು ಮತ್ತು ಬರೆಯಲು ಬರುತ್ತದೆಯೋ ಇಲ್ಲವೋ ಎಂಬುದನ್ನು ತಿಳಿಯಲು ಒಂದು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ.
  2. ಈ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಶ್ರೇಣೀಕರಿಸಲಾಗುತ್ತದೆ.
  3. ಒಂದು ಹುದ್ದೆಗೆ 10 ಅಭ್ಯರ್ಥಿಗಳಂತೆ 1:10 ರ ಅನುಪಾತದಲ್ಲಿ ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ.

B) ಸಂದರ್ಶನ:

  1. ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ ಮತ್ತು ಅಭ್ಯರ್ಥಿಯ ಸಾಮಾನ್ಯ ಜ್ಞಾನ, ವ್ಯಕ್ತಿತ್ವ ಮತ್ತು ಹುದ್ದೆಗೆ ಸಂಬಂಧಿಸಿದ ಕೌಶಲ್ಯಗಳನ್ನು ಮೌಲ್ಯಮಾಪನ ಮಾಡುತ್ತದೆ.

C) ಆಯ್ಕೆ :-

  1. ಅರ್ಹತಾ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :-

  • ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ ಭೇಟಿ ನೀಡಿ.
  • ನಂತರ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಎಂಬ ಬಟನ್ ಕ್ಲಿಕ್ ಮಾಡಿ.
  • ಆನ್‌ಲೈನ್ ಅರ್ಜಿ ಫಾರ್ಮ್ ನಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಖಚಿತವಾಗಿ ಮತ್ತು ಸಂಪೂರ್ಣವಾಗಿ ಭರ್ತಿ ಮಾಡಿ.
  • SSLC ಅಂಕಪಟ್ಟಿ , ಆಧಾರ್ ಕಾರ್ಡ್ , ಜಾತಿ ಪ್ರಮಾಣಪತ್ರ ,ಮೀಸಲಾತಿ ಕೋರುವ ದಾಖಲೆಗಳುಗಳನ್ನೂ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು. ಎಲ್ಲಾ ಮಾಹಿತಿಯನ್ನು ಖಚಿತಪಡಿಸಿಕೊಂಡ ನಂತರ, ‘ಅರ್ಜಿ ಸಲ್ಲಿಸಿ’ ಬಟನ್ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು ಹೀಗೇವೆ :- ಅರ್ಜಿ ಸಲ್ಲಿಸಲು 03/07/ 2024 ರಿಂದ 01/ 08/ 2024 ರ ವರೆಗೆ ಅವಕಾಶ ಇರುತ್ತದೆ.

ಅಧಿಸೂಚನೆ PDF ಡೌನ್ ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಭಾರತೀಯ ವಾಯುಪಡೆಯಲ್ಲಿ ‘ಅಗ್ನಿವೀರ್‌ ವಾಯು’ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಿ.

Sharing Is Caring:

Leave a Comment