ಭಾರತ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಿದೆ. ವಿಶ್ವದ ಅತೀದೊಡ್ಡ ಆರೋಗ್ಯ ವಿಮಾ ಯೋಜನೆ ಎಂದು ಗುರುತಿಸಿಕೊಂಡಿರುವ ಆಯುಷ್ಮಾನ್ ಭಾರತ್ ಯೋಜನೆ ಅಥವಾ ಈಗಿನ ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆ (ಪಿಎಂಜೆಎವೈ) ಬಡ ಹಾಗೂ ಕೆಳ ವರ್ಗದ ಕೋಟ್ಯಂತರ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಗಳು ಸಿಗುವಂತೆ ಮಾಡಿದೆ. ಈ ಯೋಜನೆಯಡಿ ಬಿಪಿಎಲ್ ಕುಟುಂಬಕ್ಕೆ ವರ್ಷಕ್ಕೆ 5ಲಕ್ಷ ರೂ. ತನಕ ವೈದ್ಯಕೀಯ ಚಿಕಿತ್ಸೆಯನ್ನು ಉಚಿತವಾಗಿ ಪಡೆಯಲು ಅವಕಾಶವಿದೆ. ಬಿಪಿಎಲ್ ಪಡಿತರ ಕಾರ್ಡು ಹೊಂದಿರುವವರು ಹಾಗೂ ರಾಷ್ರ್ಟೀಯ ಸ್ವಾಸ್ಥ್ಯ ಭೀಮಾ ಯೋಜನೆಯಲ್ಲಿ ನೋಂದಾಯಿತವಾಗಿರುವ ಫಲಾನುಭವಿಗಳಿಗೆ ಒಂದು ವರ್ಷಕ್ಕೆ 5ಲಕ್ಷಗಳವರೆಗೆ ಉಚಿತ ಚಿಕಿತ್ಸೆ ಲಭ್ಯವಿದೆ.
ಇನ್ನು ಎಪಿಎಲ್ ಕಾರ್ಡುದಾರರು ಆಥವಾ ಬಿಪಿಎಲ್ ಕಾರ್ಡು ಹೊಂದಿಲ್ಲದವರಿಗೆ ಸಹ-ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್ ದರದ 30% ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ1.50 ಲಕ್ಷ ಇರುತ್ತದೆ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಿ ಚಿಕಿತ್ಸೆ ಪಡೆದುಕೊಳ್ಳಬಹುದು. ಇನ್ನು ಪ್ರಾಥಮಿಕ ಮತ್ತು ಸಾಮಾನ್ಯ ದ್ವಿತೀಯ ಚಿಕಿತ್ಸೆಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ನೀಡಲಾಗುತ್ತದೆ. ದ್ವಿತೀಯ ಕ್ಲಿಷ್ಟಕರ ಚಿಕಿತ್ಸೆಗಳು ಮತ್ತು ತೃತೀಯ ಹಂತದ ಕಾಯಿಲೆಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿದ್ದಲ್ಲಿ ಅಲ್ಲಿಯೇ ನೀಡಲಾಗುತ್ತದೆ. ಇಲ್ಲದಿದ್ದರೆ ರೆಫರಲ್ ನೀಡಲಾಗುತ್ತದೆ. ರೆಫರಲ್ ಪಡೆದುಕೊಂಡ ರೋಗಿಯು ತಾನು ಇಚ್ಚಿಸುವ ಯಾವುದೇ ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ಹೌದು ರಸ್ತೆ ಅಪಘಾತ ಸೇರಿದಂತೆ 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್ ಇಲ್ಲದೆ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು. ಹಾಗಾದ್ರೆ ಯೋಜನೆಯ ಲಾಭ ಪಡೆಯೋದು ಹೇಗೆ? ಕಾರ್ಡ್ ಪಡೆಯೋದು ಹೇಗೆ ಏನೆಲ್ಲಾ ಲಾಭ ಸಿಗುತ್ತೆ ನೋಡೋಣ.
ಆಯುಷ್ಮಾನ್ ಕಾರ್ಡ್ ಮಾಡಿಸೋದು ಹೇಗೆ?
ಜನರು ಈಗ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‍ಗಳನ್ನು ಪಡೆಯುವ ಪ್ರಕ್ರಿಯೆ ಸರಳವಾಗಿದೆ. ಕೈಯಲ್ಲಿರುವ ಮೊಬೈಲ್ ಫೋನ್‌ಗಳ ಮೂಲಕವೇ ಜನರು ಕಾರ್ಡ್ ಪಡೆದು, ಅದರ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ. ಅಂಡ್ರಾಯ್ಡ್ ಮೊಬೈಲ್‍ಗಳ ಮೂಲಕ ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಆಯುಷ್ಮಾನ್ ಭಾರತ್ ಕಾರ್ಡ್‍ಗಳನ್ನು ನೀಡಲಾಗುತ್ತಿದೆ. ಒಂದು ವೇಳೆ ತಾಂತ್ರಿಕ ತೊಂದರೆ ಕಂಡುಬಂದಲ್ಲಿ ಹತ್ತಿರದ ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಮೂಲಕವೂ ಕಾರ್ಡ್‍ಗಳನ್ನು ಮಾಡಿಕೊಡಲಾಗುತ್ತದೆ.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್‍ಗಳನ್ನು ನೀಡುವುದು ಸೇರಿದೆ. ಜನರು ತಮ್ಮ ಅಂಡ್ರಾಯ್ಡ್ ಮೊಬೈಲ್‍ಗಳ ಮೂಲಕ ಮತ್ತು ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯೊಂದಿಗೆ ನೋಂದಣಿ ಮಾಡಿಕೊಂಡು ಕಾರ್ಡ್ ಪಡೆಯುವ ಸೌಲಭ್ಯವನ್ನು ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಅತೀ ಮುಖ್ಯವಾಗಿ ಆಯುಷ್ಮಾನ್ ಭವಃ ಕಾರ್ಡ್ ಪಡೆಯಲು ಪ್ರತಿ ಕುಟುಂಬವು ಎಪಿಎಲ್ ಅಥವಾ ಬಿಪಿಎಲ್ ರೇಷನ್ ಕಾರ್ಡ್ ತಪ್ಪದೇ ಹೊಂದಿರಬೇಕು. ರೇಷನ್ ಕಾರ್ಡ್‍ಗಳಿಗೆ ಆಧಾರ್ ಸಂಖ್ಯೆ ಜೋಡಣೆಯಾಗಿರಬೇಕು. ಸಾರ್ವಜನಿಕರು ತಮ್ಮ ಸ್ಮಾರ್ಟ್ ಮೊಬೈಲ್‍ಗಳ ಮೂಲಕ ಯಾವುದೇ ವೆಚ್ಚವಿಲ್ಲದೇ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯ ಕಾರ್ಡ್‍ಗಳನ್ನು ಪಡೆದುಕೊಳ್ಳಬಹುದಾಗಿದೆ. ತಾಂತ್ರಿಕವಾಗಿ ಯಾವುದೇ ತೊಂದರೆ ಕಂಡುಬಂದಲ್ಲಿ ಸಹ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು. ಈಗಾಗಲೇ ಎಬಿ.ಪಿ.ಎಮ್.ಜೆ.ವೈ-ಸಿಎಮ್ ಆರೋಗ್ಯ ಕರ್ನಾಟಕ ಕಾರ್ಡ್ ಅನ್ನು ಬೇರೆ ಯಾವುದಾದರೂ ಯೋಜನೆಗೆ ನೋಂದಣಿ (ಇ-ಕೆವೈಸಿ) ಲಿಂಕ್ ಮಾಡಿಕೊಂಡಿದ್ದರೆ ನೇರವಾಗಿ ಪೊರ್ಟಲ್‍ನಲ್ಲಿ ಕಾರ್ಡ್ ಜನರೇಷನ್ ವೆರಿಪೈ ಎಂದು ಕಂಡು ಬರುತ್ತದೆ. ಒಂದು ವೇಳೆ ಬೇರೆ ಯಾವುದಾದರು ಯೋಜನೆಗೆ ಕಾರ್ಡ್ ಅನ್ನು ನೋಂದಣಿ ಮಾಡದೇ ಇದ್ದರೆ (ನಿಮ್ಮ ಇ-ಕೆವೈಸಿ ಹೊಂದಿಲ್ಲದಿದ್ದರೆ) ಆಧಾರ್ ಒಟಿಪಿ ಮುಖಾಂತರ ಇ-ಕೆವೈಸಿ ಮಾಡಿಕೊಂಡು ಕಾರ್ಡ್‍ನ್ನು ಪಡೆಯಬಹುದಾಗಿದೆ.
ಕಾರ್ಡ್ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡೋದು ಹೇಗೆ?
ಇನ್ನು ಮುಖ್ಯವಾಗಿ ಕಾರ್ಡ್‍ಗಳನ್ನು ಪಡೆಯಲು ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಮತ್ತು ಆಧಾರ್ ಕಾರ್ಡ್‍ನೊಂದಿಗೆ ತಮ್ಮ ಮೊಬೈಲ್‍ನಲ್ಲಿಯೇ ನೋಂದಣಿ ಮೂಲಕ ಕಾರ್ಡ್‍ಗಳನ್ನು ಪಡೆಯಬಹುದು. ಜನರು ಮೊಬೈಲ್‌ನಲ್ಲಿ http://beneficiary.nha.gov.in ಎಂದು ಟೈಪ್ ಮಾಡಿದ ನಂತರ ಪಿ.ಎಮ್.ಜೆ.ವೈ ಬೆನಿಫಿಸಿರಿ ಪೋರ್ಟಲ್ ಕಂಡು ಬರುತ್ತದೆ. ಪೋರ್ಟಲ್ ಅನ್ನು ತೆರೆದಾಗ ಲಾಗಿನ್ ಆಸ್ ಎಂದು ಮಾಹಿತಿ ಕೇಳುವ ಹಂತದಲ್ಲಿ ಬೆನ್‍ಫಿಸಿರಿ ಎಂಬುದನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರದಲ್ಲಿ ತಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಒಟಿಪಿ ಮುಖಾಂತರ ಲಾಗಿನ್ ಮಾಡಿಕೊಳ್ಳಬೇಕು. ಒಟಿಪಿ ನೋಂದಾಯಿಸಿ ಸಬ್‍ಮಿಟ್ ಮಾಡಿದ ನಂತರ ಪಿ.ಎಮ್.ಜೆ.ವೈ ಪೊರ್ಟಲ್ ಒಪನ್ ಆಗುತ್ತದೆ. ಇಲ್ಲಿ ಸಾರ್ವಜನಿಕರು ತಮ್ಮ ರಾಜ್ಯ ಎಂಬಲ್ಲಿ ಕರ್ನಾಟಕ, ಜಿಲ್ಲೆ ವಿವರಗಳನ್ನು ಭರ್ತಿ ಮಾಡಿ ಕ್ಲೈಮ್‍ಟೈಪ್ ಎನ್ನುವಲ್ಲಿ ಕುಟುಂಬ ಎಂದು ಆಯ್ಕೆ ಮಾಡಿಕೊಂಡು ಆಧಾರ್ ಸಂಖ್ಯೆ ನಮೂದಿಸಿ ಸರ್ಚ್ ಮಾಡಬೇಕು. ಇನ್ನು ಅದೇ ಪೋರ್ಟಲ್ ನಲ್ಲಿ ನಿಮ್ಮ ಕಾರ್ಡ್ ಈಗಾಗ್ಲೇ ರಿಜಿಸ್ಟರ್ ಆಗಿದ್ಯಾ ಇಲ್ವಾ ಅನ್ನೋದನ್ನ ಕೂಡ ಬಹಳ ಸುಲಭವಾಗಿ ಚೆಕ್ ಮಾಡಿ ಕೊಳ್ಳಬಹುದು.
ಇದನ್ನೂ ಓದಿ: BSNL ನ 797 ರೂಪಾಯಿ ಪ್ಲಾನ್ 300 ದಿನಗಳ ವ್ಯಾಲಿಡಿಟಿ ಮತ್ತು 600GB ಡೇಟಾವನ್ನು ನೀಡುತ್ತದೆ; ಸಂಪೂರ್ಣ ಮಾಹಿತಿ ಇಲ್ಲಿದೆ.