ಪ್ರಧಾನ ಮಂತ್ರಿ ಆವಾಸ್ ಯೋಜನೆಯು ಸೂರು ಇಲ್ಲದೆ ಇರುವವರಿಗೆ ಮನೆ ಮತ್ತು ಮೂಲ ಸೌಕರ್ಯ ಒದಗಿಸುವ ಉದ್ದೇಶದಿಂದ ಆರಂಭ ಆಗಿರುವ ಯೋಜನೆ ಆಗಿದೆ. ಈಗಾಗಲೇ ಸಾವಿರಾರು ಜನರಿಗೆ ಈ ಯೋಜನೆಯ ಅಡಿಯಲ್ಲಿ ಮನೆ ಸಿಕ್ಕಿದೆ. ಈಗ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯದ ಫಲಾನುಭವಿಗಳಿಗೆ ನೀಡಲು ಆರಂಭ ಆಗಿರುವ ಮನೆಗಳ ನಿರ್ಮಾಣದ ಬಗ್ಗೆ ಈಗ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ.
ಮನೆಗಳ ನಿರ್ಮಾಣವನ್ನು ಹಂತ ಹಂತವಾಗಿ ಪೂರ್ಣ ಗೊಳಿಸಲು ಸೂಚಿಸಿದ ಸಿಎಂ :- ನಿನ್ನೆ ಸಿಎಂ ಸಿದ್ಧರಾಮಯ್ಯ ಅವರು ಕೃಷ್ಣಾದಲ್ಲಿ ವಸತಿ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದರು. ಕೊಳಚೆ ನಿರ್ಮೂಲನೆ ಮಂಡಳಿ ಅಡಿಯಲ್ಲಿ ಒಟ್ಟು 82 ಸಾವಿರ ಮನೆಗಳು ನಿರ್ಮಾಣ ಆಗಿತ್ತಿವೆ ಜೊತೆಗೆ ರಾಜೀವ್ ಗಾಂಧಿ ವಸತಿ ನಿಗಮ ಅಡಿಯಲ್ಲಿ 47,800 ಮನೆಗಳು ನಿರ್ಮಾಣ ಆಗಿತ್ತಿವೆ ಅಲ್ಲಿಗೆ ಒಟ್ಟು 1.30 ಲಕ್ಷ ಮನೆಗಳು ನಿರ್ಮಾಣ ಕಾರ್ಯ ನಡೆಯುತ್ತಿದೆ. ಅಷ್ಟು ಮನೆಗಳ ನಿರ್ಮಾಣ ಕಾರ್ಯವನ್ನು ಹಂತ ಹಂತವಾಗಿ ಪೂರ್ಣ ಮಾಡುವಂತೆ ಸಿಎಂ ಸೂಚನೆ ನೀಡಿದ್ದಾರೆ.
ಸಹಾಯಧನ ಹೊರತು ಪಡಿಸಿ ಉಳಿದ ಹಣವನ್ನು ಫಲಾನುಭವಿಗಲೇ ಭರಿಸಬೇಕು :-
ರಾಜ್ಯ ಮತ್ತು ಕೇಂದ್ರ ಸರ್ಕಾರವು ಮನೆ ನಿರ್ಮಾಣಕ್ಕೆ ಸಹಾಯಧನ ನೀಡುತ್ತದೆ. ಆದರೆ ಅದಕ್ಕೂ ಹೆಚ್ಚಿನ ಮೊತ್ತವು ಮನೆ ನಿರ್ಮಾಣಕ್ಕೆ ಬೇಕಾಗುತ್ತದೆ. ರಾಜ್ಯ ಮತ್ತು ಕೇಂದ್ರ ಅನುದಾನದ ಹಣ ಹೊರತು ಪಡಿಸಿ ಪ್ರತಿ ಮನೆಗೆ ಫಲಾನುಭವಿಗಳು 4 ರಿಂದ 5 ಲಕ್ಷ ರೂಪಾಯಿಗಳ ವರೆಗೆ ಹಣ ಭರಿಸಬೇಕಾಗೊತ್ತು. ಆದರೆ ಈಗ ಕೊಳಗೇರಿ ನಿವಾಸಿಗಳು ಈ ಹಣವನ್ನು ಭರಿಸಲು ಸಾಧ್ಯವಾಗದೆ ಇರುವುದರಿಂದ ಮನೆ ನಿರ್ಮಾಣ ಕಾರ್ಯ ಅರ್ಧಕ್ಕೆ ನಿಂತಿತ್ತು. ಈಗ ಅದಕ್ಕೆ ಸಿದ್ಧರಾಮಯ್ಯ ಅವರು ಉಳಿದ ಹಣವನ್ನು ಅಂದರೆ 4 ಲಕ್ಷ ರೂಪಾಯಿ ಸರ್ಕಾರವು ನೀಡಲಿದೆ ಕೇವಲ ಒಂದು ಲಕ್ಷ ರೂಪಾಯಿ ಹಣವನ್ನು ಫಲಾನುಭವಿಗಳು ನೀಡಬೇಕು ಎಂದು ತಿಳಿಸಿದ್ದಾರೆ. ಜೊತೆಗೆ ಫಲಾನುಭವಿಗಳಿಗೆ ಮೊದಲ ಹಂತದಲ್ಲಿ 500 ಮನೆ ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಒಂದು ಲಕ್ಷ ರೂಪಾಯಿ ಪಡೆದು ಮನೆ ನಿರ್ಮಾಣ ಕಾರ್ಯ ಚುರುಕು ಗೊಳಿಸಬೇಕು :- ಫಲಾನುಭವಿಗಳಿಂದ ಒಂದು ಲಕ್ಷ ರೂಪಾಯಿಗಳನ್ನು ಪಡೆದು ಮನೆ ನಿರ್ಮಾಣದ ಕಾರ್ಯವನ್ನು ಚುರುಕು ಗೊಳಿಸಿ ಫಲಾನುಭವಿಗಳಿಗೆ ನೀಡಬೇಕು ಎಂದು ಸಿಎಂ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಕರ್ನಾಟಕ ಗೃಹ ಮಂಡಳಿ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ವಿಳಂಬಕ್ಕೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ ಸಿಎಂ :- ಕರ್ನಾಟಕ ಗೃಹ ಮಂಡಳಿ ಭೂಸ್ವಾಧೀನ ಮಾಡಿಕೊಂಡ ಜಮೀನಿನಲ್ಲಿ ತ್ವರಿತವಾಗಿ ಕಾಮಗಾರಿ ಪ್ರಾರಂಭಿಸಲಾಗಿದೆ. ಆದರೆ, 50:50 ಅನುಪಾತದಲ್ಲಿ ಜಮೀನು ಪಡೆಯಲು ರೈತರಿಗೆ ಮರುಹಂಚಿಕೆ ಮಾಡುವ ಭೂಮಿಯ ಪರಿವರ್ತನೆಯಲ್ಲಿ ವಿಳಂಬವಾಗುತ್ತಿದೆ.ಇದರ ಬಗ್ಗೆ ನೋಂದಣಿ ಮತ್ತು ಮುದ್ರಾಂಕ, ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯವರ ಬಳಿ ಚರ್ಚೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಆಗ್ರಹಿಸಿದರು.
ಸಭೆಯಲ್ಲಿ ಯಾರು ಯಾರು ಇದ್ದರೂ?
ಸಭೆಯಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ಹಾಗೂ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಮತ್ತು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಇನ್ನಿತರರು ಭಾಗವಹಿಸಿದ್ದರು.
ಇದನ್ನೂ ಓದಿ: SBI ಬ್ಯಾಂಕ್ ಶಿಶು ಮುದ್ರಾ ಯೋಜನೆ ಅಡಿಯಲ್ಲಿ 50,000 ರೂಪಾಯಿ ಸಾಲ ನೀಡುತ್ತಿದೆ; ಈ ರೀತಿ ಅರ್ಜಿ ಸಲ್ಲಿಸಿ.