ಪಶುಸಂಗೋಪನಾ ಇಲಾಖೆಯಲ್ಲಿ 800 ಪಶುವೈದ್ಯರ ಕೊರತೆಯಿದ್ದು, 400 ಪಶುವೈದ್ಯರ ನೇಮಕಕ್ಕೆ ನಿರ್ಧರಿಸಲಾಗಿದೆ. ಇಲಾಖೆಯೇ ನೇಮಕಾತಿ ನಿಯಮಗಳ ಮೂಲಕ ಭರ್ತಿ ಮಾಡಿಕೊಳ್ಳಲು ಒಪ್ಪಿಗೆ ನೀಡಿದೆ. ಹೌದು ರಾಜ್ಯದಲ್ಲಿ ಪಶು ವೈದ್ಯರ ಕೊರತೆ ಇದ್ದು, ಇದನ್ನು ನೀಗಿಸಲು ಶೀಘ್ರದಲ್ಲಿಯೇ 400 ಮಂದಿ ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು. ಜತೆಗೆ ಪಶುಚಿಕಿತ್ಸಾಲಯಗಳಿಗೆ ಕಟ್ಟಡ ಕೊರತೆ ನೀಗಿಸಲು ರಾಜ್ಯಾದ್ಯಂತ 200 ಕಟ್ಟಡಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ಪಶುಸಂಗೋಪನೆ ಸಚಿವ ಕೆ ವೆಂಕಟೇಶ್ ತಿಳಿಸಿದ್ದಾರೆ. ಅಲ್ದೇ ಸಿಎಂ ಸಿದ್ದರಾಮಯ್ಯ ರಾಜ್ಯಾದ್ಯಂತ 200 ಪಶುಚಿಕಿತ್ಸಾಲಯ ಕಟ್ಟಡಗಳನ್ನು ಮಂಜೂರು ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಮನವಿಗೆ ಸ್ಪಂದಿಸಿ ರಾಜ್ಯಾದ್ಯಂತ 200 ಪಶುಚಿಕಿತ್ಸಾಲಯ ಕಟ್ಟಡಗಳನ್ನು ಮಂಜೂರು ಮಾಡಿದ್ದಾರೆ, ಮುಖ್ಯವಾಗಿ ಮೈಸೂರು ಜಿಲ್ಲೆಗೆ 12 ಪಶು ಚಿಕಿತ್ಸಾಲಯ ಕಟ್ಟಡಗಳು ಲಭ್ಯವಾಗಿದೆ ಅಂತ ಕಂದೇಗಾಲ ಗ್ರಾಮದಲ್ಲಿ ನೂತನ ಪಶುಚಿಕಿತ್ಸಾ ಆಸ್ಪತ್ರೆ ಉದ್ಘಾಟಿಸಿ ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ.
ಮುಖ್ಯವಾಗಿ ಪಶುಸಂಗೋಪನಾ ಇಲಾಖೆ ಬರಗಾಲ ಪರಿಸ್ಥಿತಿಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಮುಂಜಾಗ್ರತೆ ವಹಿಸಿ, ರಾಜ್ಯಾದ್ಯಂತ 400 ಕೋಟಿ ವೆಚ್ಚದಲ್ಲಿ ರೈತರಿಗೆ ಮೇವಿನ ಬಿತ್ತನೆ ಬೀಜಗಳನ್ನು ವಿತರಣೆ ಮಾಡಿದೆ. ಜಿಲ್ಲೆಯಲ್ಲಿ 1.9 ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್ಗಳನ್ನು ವಿತರಿಸಲಾಗಿದ್ದು, ಹೀಗಾಗಿ ಬರಗಾಲದ ಪರಿಸ್ಥಿತಿಯಲ್ಲಿಯೂ ಹಾಲಿನ ಉತ್ಪಾದನೆ ಹೆಚ್ಚಾಗಿತ್ತು ಇದಕ್ಕಾಗಿ ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಪಶುವೈದ್ಯರ ಕೊರತೆ ನೀಗಿಸಲು 400 ಪಶು ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ, ಅಂತ ಸಚಿವರು ತಿಳಿಸಿದ್ದಾರೆ.
ಹೊಸದಾಗಿ 200 ಪಶು ಚಿಕಿತ್ಸಾಲಯಕ್ಕೆ ಕಟ್ಟಡ ಮಂಜೂರು..
ರಾಜ್ಯದಲ್ಲಿ ಪಶು ವೈದ್ಯರ ಕೊರತೆ ಬಹಳವಾಗಿದ್ದನ್ನ ಮನಗಂಡಿದ್ದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಮುಖ್ಯವಾಗಿ ಅವ್ರ ನಂಜನಗೂಡು ತಾಲೂಕಿಗೆ 3 ಪಶುಚಿಕಿತ್ಸಾ ಆಸ್ಪತ್ರೆ ತೆರೆಯಲು ಬೇಡಿಕೆ ಸಲ್ಲಿಸಿದ್ದರು. ಜೊತೆಗೆ ರಾಜ್ಯದಲ್ಲಿನ ವೈದ್ಯರ ಕೊರತೆ ಬಗ್ಗೆಯೂ ಸಹ ಮಾತನಾಡಿದ್ದರು. ಮುಖ್ಯವಾಗಿ ನಂಜನಗೂಡಿನ ಕಂದೇಗಾಲ ಕಾಡಂಚಿನ ಗ್ರಾಮವಾಗಿದ್ದು, ಜಾನುವಾರುಗಳಿಗೆ ಚಿಕಿತ್ಸೆ ಕೊಡಿಸಲು ರೈತರು ಯಡಿಯಾಲದ ಕೇಂದ್ರವನ್ನು ಅವಲಂಬಿಸಬೇಕಾಗಿತ್ತು. ಆದ್ರೆ ಈ ಭಾಗದಲ್ಲಿ 2,100ಕ್ಕೂ ಹೆಚ್ಚು ಜಾನುವಾರುಗಳಿದ್ದು, ಗ್ರಾಮಕ್ಕೆ ಪಶುಚಿಕಿತ್ಸಾ ಕೇಂದ್ರದ ಅಗತ್ಯತೆ ಬಗ್ಗೆ ಇಲಾಖೆಗೆ ಮನವರಿಕೆ ಮಾಡಿಕೊಟ್ಟಿದ್ದರು.
ಹೀಗಾಗಿ ಸದ್ಯ ಹೊಸದಾಗಿ ಆಸ್ಪತ್ರೆಯನ್ನು ಮಂಜೂರು ಮಾಡಿದ್ದು ಮುಂದಿನ ದಿನಗಳಲ್ಲಿ ಚಿಕಿತ್ಸಾ ಕೇಂದ್ರಕ್ಕೆ ಸುಸಜ್ಜಿತ ಹೊಸ ಕಟ್ಟಡವನ್ನು ಮಂಜೂರು ಮಾಡಲಾಗುವುದು,ಅಂತ ಸಚಿವರು ತಿಳಿಸಿದ್ದಾರೆ. ಈ ಕುರಿತಂತೆ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ನಂಜನಗೂಡು ತಾಲೂಕಿಗೆ 3 ಪಶು ವೈದ್ಯಕೀಯ ಚಿಕಿತ್ಸಾ ಕೇಂದ್ರಗಳ ಅಗತ್ಯವಿದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಡಲಾಗಿತ್ತು. ಸದ್ಯ ಕಂದೇಗಾಲ ಗ್ರಾಮದಲ್ಲಿ ಆಸ್ಪತ್ರೆ ತೆರೆಯಲಾಗಿದ್ದು, ಮುಂಬರುವ ದಿನಗಳಲ್ಲಿ ತಾಲೂಕಿನ ಕುರಹಟ್ಟಿ ಹಾಗೂ ದೇವರಸನಹಳ್ಳಿಯಲ್ಲಿ ಪಶು ಆಸ್ಪತ್ರೆ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಅಂತ ಹರ್ಷ ವ್ಯಕ್ತಪಡಿಸಿದರು. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಸ್ವಂತ ಉದ್ಯೋಗ ಮಾಡುವವರಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಒಂದು ಲಕ್ಷ ರೂಪಾಯಿ ಸಾಲ ಸೌಲಭ್ಯ.
400 ಪಶು ವೈದ್ಯರ ನೇಮಕಕ್ಕೆ ಸಿಗಲಿದೆ ಶೀಘ್ರವೇ ಅನುಮೋದನೆ
ಪಶು ಸಂಗೋಪನಾ ಸಚಿವ ಕೆ ವೆಂಕಟೇಶ್ ಅವ್ರು ಪಶು ವೈದ್ಯರ ಕೊರತೆ ಹಾಗೂ ನೇಮಕಾತಿಯ ಬಗ್ಗೆ ಅಧಿಕೃತವಾಗಿ ಹೇಳಿಕೆ ಕೊಟ್ಟಿದ್ದು, ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿಯೂ ಸಹ ಮಾಹಿತಿ ಹಂಚಿಕೊಂಡಿದ್ದಾರೆ. ಹೌದು ರಾಜ್ಯದಲ್ಲಿ ಪಶು ವೈದ್ಯರ ಕೊರತೆಯನ್ನು ನೀಗಿಸಲು ಶೀಘ್ರದಲ್ಲಿಯೇ 400 ಮಂದಿ ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಪಶು ಚಿಕಿತ್ಸಾಲಯಗಳಿಗೆ ಕಟ್ಟಡ ಕೊರತೆ ನೀಗಿಸಲು ರಾಜ್ಯಾದ್ಯಂತ 200 ಕಟ್ಟಡಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಸದ್ಯ ವಿಚಾರ ತಿಳಿಯುತ್ತಿದ್ದಂತೆ ಸಾಕಷ್ಟು ರತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದು ಸಾಧ್ಯವಾದಷ್ಟು ಬೇಗ ಕೆಲಸ ಅನುಷ್ಠಾನಕ್ಕೆ ಬಂದ್ರೆ ಸಾಕು ಅಂತ ಕಾಮೆಂಟ್ಸ್ ಮಾಡ್ತಿದ್ದಾರೆ. ಇನ್ನು ಶೀಘ್ರದಲ್ಲೇ ವೈದ್ಯರ ನೇಮಕಕ್ಕೆ ಅರ್ಜಿ ಕರೆಯಲಾಗುವುದೆಂದು ಇಲಾಖೆ ತಿಳಿಸಿದ್ದು, ಯಾವಾಗ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ಆಗುತ್ತೆ ಅನ್ನೋದರ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ. ಏನೇ ಆದ್ರೂ ಪಶು ಸಂಗೋಪನ ಸಚಿವರು ಒಳ್ಳೆ ಕೆಲ್ಸಕ್ಕೆ ಮುಂದಾಗಿದ್ದು ಆದಷ್ಟು ಬೇಗ ಕೆಲಸ ಕಾರ್ಯರೂಪಕ್ಕೆ ಬಂದ್ರೆ ಒಳ್ಳೆಯದಲ್ವಾ??
ಇದನ್ನೂ ಓದಿ: ಈ ಯೋಜನೆಯಲ್ಲಿ ಕೇವಲ 20 ರೂಪಾಯಿ ಪಾವತಿಸಿ 20 ಲಕ್ಷ ರೂಪಾಯಿ ಪ್ರೀಮಿಯಂ ಗಳಿಸಿ.