ಪ್ರತಿ ವರ್ಷವು ಹಲವು ಸಂಘ ಸಂಸ್ಥೆಗಳು ಒಂದು ತರಗತಿಯಿಂದ ಮುಂದಿನ ತರಗತಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡುತ್ತವೆ. ಹಾಗೆಯೇ ಈ ವರ್ಷವೂ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡುತ್ತಿದ್ದು. ವಿದ್ಯಾರ್ಥಿ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು ಅವಕಾಶ ಇದೆ. ಯಾರು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸುವ ವಿಧಾನ ಹೇಗೆ ಎಂಬುದನ್ನು ತಿಳಿಯಿರಿ.
ಯಾರಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ?: ವಿದ್ಯಾ ಪೋಷಕ ಸಂಘವು ಶೇಕಡ 90% ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ಒಕ್ಕಲಿಗ ಸಮುದಾಯದ ಅತ್ಯುತ್ತಮ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತದೆ. ಈ ವಿದ್ಯಾರ್ಥಿ ವೇತನವು ಆರ್ಥಿಕವಾಗಿ ಹಿಂದುಳಿದ ಒಕ್ಕಲಿಗ ವಿದ್ಯಾರ್ಥಿಗಳನ್ನು ಉತ್ತೇಜಿಸಲು ಮತ್ತು ಶಿಕ್ಷಣದಲ್ಲಿ ಮುಂದುವರೆಯಲು ಸಹಾಯ ಮಾಡುವ ಉದ್ದೇಶವನ್ನು ಹೊಂದಿದೆ.
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಾಗ ಇರಬೇಕಾದ ಅರ್ಹತೆ ಏನು?
- ಸಮುದಾಯ :- ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಒಕ್ಕಲಿಗ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಆಗಿರಬೇಕು.
- ತರಗತಿ :- ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಹತ್ತನೇ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇಕಡ 90 ಅಥವಾ ಅದಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು.
- ಸ್ಥಳ :- ಬೆಂಗಳೂರು ಉತ್ತರ ತಾಲೂಕು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ & ಕೋಲಾರ ಜಿಲ್ಲೆಯ ನಿವಾಸಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವಾಗ ನೀಡಬೇಕಾದ ದಾಖಲೆಗಳು:-
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಾಗ ಕೆಲವು ದಾಖಲೆಗಳನ್ನು ನೀಡಬೇಕು. ಅವು ಯಾವುದೆಂದರೆ :-
- ಜಾತಿ ಪ್ರಮಾಣ ಪತ್ರ.
- ಆದಾಯ ಪ್ರಮಾಣ ಪತ್ರ.
- ಆಧಾರ್ ಕಾರ್ಡ್.
- ಬ್ಯಾಂಕ್ ಪಾಸ್‌ಬುಕ್‌ನ ಪ್ರತಿ
- ಅಂಕಪಟ್ಟಿಯ ನಕಲು ಪ್ರತಿ.
- ವಿಳಾಸ ಪುರಾವೆ (ಆಧಾರ್ ಕಾರ್ಡ್‌ನಂತಹ ಯಾವುದೇ ಸರ್ಕಾರಿ ದಾಖಲೆ).
- ಮೊಬೈಲ್ ಸಂಖ್ಯೆಗೆ.
ಅರ್ಜಿ ಸಲ್ಲಿಸುವ ವಿಧಾನ :- ಭರ್ತಿ ಮಾಡಿದ ಅರ್ಜಿ ನಮೂನೆ ಹಾಗೂ ದಾಖಲೆಗಳನ್ನು ಅಟ್ಯಾಚ್ ಮಾಡಿ ಅರ್ಜಿಯನ್ನು ಕೆಳಗಿನಂತೆ ಕಳುಹಿಸಬೇಕು. ಅರ್ಜಿ ಕಳುಹಿಸುವ ವಿಳಾಸ :- ಅಧ್ಯಕ್ಷರು, ವಿದ್ಯಾಪೋಷಕರ ಸಂಘ, ನಂ. 12, 1ನೇ ಮುಖ್ಯರಸ್ತೆ, ಸುರಭಿ ಬಡಾವಣೆ, ಯಲಹಂಕ, ಬೆಂಗಳೂರು – 560064.. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಿಗೆ ಉಚಿತ NEET ತರಬೇತಿ.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಮಾಹಿತಿ :-
ಅರ್ಜಿ ನಮೂನೆಯನ್ನು ಇದೆ ಬರುವ ಜೂಲೈ 31 2024 ರ ಒಳಗಾಗಿ ಮೇಲೆ ತಿಳಿಸಿರುವ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ಬಗ್ಗೆ ಯಾವುದೇ ರೀತಿಯ ಅನುಮಾನಗಳು ಅಥವಾ ಹೆಚ್ಚಿನ ಮಾಹಿತಿ ಅಗತ್ಯ ಇದ್ದರೆ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ:- 9008891539 ಅಥವಾ 9845048696 ಗೆ ಕರೆಮಾಡಿ.
ವಿದ್ಯಾರ್ಥಿವೇತನದ ಪ್ರಯೋಜನಗಳು :-
- ಶೈಕ್ಷಣಿಕ ಯಶಸ್ಸು:ಉತ್ತಮ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಮಾಡಲು ಸಹಾಯ ಆಗುತ್ತದೆ. .ಅವರ ಪೂರ್ಣ ಸಾಮರ್ಥ್ಯವನ್ನು ತಲುಪಲು ಸಹಾಯ ಮಾಡುತ್ತದೆ.
- ಆರ್ಥಿಕ ಸಹಾಯ: ಶುಲ್ಕ, ಪುಸ್ತಕಗಳು, ಸ್ಟೇಷನರಿ ಮತ್ತು ಇತರ ಶೈಕ್ಷಣಿಕ ವೆಚ್ಚಗಳನ್ನು ಭರಿಸಲು ಸಹಾಯ ಮಾಡುತ್ತದೆ.
- ಸಮುದಾಯಕ್ಕೆ ಪ್ರಯೋಜನ: ಶಿಕ್ಷಿತ ಮತ್ತು ಕೌಶಲ್ಯಯುತ ಕಾರ್ಮಿಕ ಶಕ್ತಿಯನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ. ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡಿದೆ. ದೇಶದ ಭವಿಷ್ಯಕ್ಕೆ ಹೂಡಿಕೆ ಮಾಡುತ್ತಿದ್ದಾರೆ.
ಇದನ್ನೂ ಓದಿ: ದ್ವಿತೀಯ ಪಿಯು ಪಾಸಾದವರಿಗೆ ಅಗ್ನಿವೀರ್ ವಾಯು ಹುದ್ದೆಗಳ ನೇಮಕಾತಿ ನಡೆಯುತ್ತಿದೆ.