ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ದಿನದಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ರಾಜ್ಯ ಸರ್ಕಾರವು ಕೋಕ್ ಹಾಕಿದೆ. ರಾಜ್ಯ ಸರ್ಕಾರವು ಹೊಸದಾಗಿ ರೇಷನ್ ಕಾರ್ಡ್ ಪಡೆಯಲು ಅರ್ಜಿ ನಮೂನೆಯನ್ನು ಬಿಡುಗಡೆ ಮಾಡುವುದಾಗಿ ಹೇಳದೆ. ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಫಲಾನುಭವಿಗಳು ಅರ್ಜಿ ಸಲ್ಲಿಸುವ ವಿಧಾನವನ್ನು ತಿಳಿಯಿರಿ.
ಆನ್ಲೈನ್ ನಲ್ಲಿಯೇ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿದೆ:- ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿಮ್ಮ ಹತ್ತಿರದ ಗ್ರಾಮ್ ಒನ್ ಕೇಂದ್ರ ಅಥವಾ ಬಾಪೂಜಿ ಕೇಂದ್ರಗಳಂತಹ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಇಲ್ಲವಾದರೆ ನಿಮ್ಮ ಮೊಬೈಲ್ ಅಥವಾ ಲ್ಯಾಪ್ಟಾಪ್ ಮೂಲಕ ಆಹಾರ ಮತ್ತು ಸರಬರಾಜು ಇಲಾಖೆಯ ಅಧಿಕೃತ ವೆಬ್ಸೈಟ್ www.ahara.nic.in ಗೆ ಭೇಟಿ ನೀಡಿ ಅರ್ಜಿ ನಮೂನೆಯಲ್ಲಿ ಕೇಳಿರುವ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ನೂತನ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕೆಳಲಾಗಿರುವ ಅರ್ಹತಾ ಮಾನದಂಡಗಳು ಏನೇನು?
ಸರಕಾರವು ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕೆಲವು ಅರ್ಹತಾ ಮಾನದಂಡಗಳನ್ನು ನಿಗದಿ ಮಾಡಿದೆ.
- ನಿವಾಸ ಸ್ಥಳ :- ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕಡ್ಡಾಯವಾಗಿ ಕರ್ನಾಟಕದಲ್ಲಿ ವಾಸಿಸುತ್ತಿರಬೇಕು.
- ರೇಷನ್ ಕಾರ್ಡ್ ಇಲ್ಲದಿರುವವರು :- ಈಗಾಗಲೇ ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರು ಈಗ ಅರ್ಜಿ ಸಲ್ಲಿಸಲು ಅನರ್ಹರು. ಹೊಸದಾಗಿ ಅರ್ಜಿ ಸಲ್ಲಿಸಲು ಮಾತ್ರ ಅವಕಾಶ ಇರುತ್ತದೆ.
- ಹೊಸದಾಗಿ ಮದುವೆ ಆದವರು :- ಮದುವೆ ಆದ ನೂತನ ದಂಪತಿಗಳು ರೇಷನ್ ಕಾರ್ಡ್ ಪಡೆಯಲು ಅರ್ಹರು.
- ಆದಾಯ :- ಕುಟುಂಬದ ಒಟ್ಟು ವಾರ್ಷಿಕ ಆದಾಯದ ಅನುಗುಣವಾಗಿ ಸರಕಾರವು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ನೀಡುತ್ತದೆ.
- ಸುಳ್ಳು ಮಾಹಿತಿ ನೀಡಬಾರದು :- ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವಾಗ ಆದಾಯದ ಬಗ್ಗೆ ಅಥವಾ ನಿವಾಸದ ಬಗ್ಗೆ ಹಾಗೂ ಸದಸ್ಯರ ವಿವರಗಳನ್ನು ಯಾವುದೇ ಕಾರಣಕ್ಕೂ ತಪ್ಪಾಗಿ ಅಥವಾ ಸುಳ್ಳು ಮಾಹಿತಿ ನೀಡಬಾರದು. ಸುಳ್ಳು ಮಾಹಿತಿ ನೀಡಿದರೆ ಕಠಿಣ ಕ್ರಮ ಕೈಗೊಳ್ಳುವುದು.
ಇದನ್ನೂ ಓದಿ: ಪೋಸ್ಟ್ ಆಫೀಸ್ ಸ್ಕೀಂ ನಲ್ಲಿ ಬ್ಯಾಂಕ್ FD ಯೋಜನೆಗಳಿಗಿಂತ ಹೆಚ್ಚಿನ ಆದಾಯ ಗಳಿಸಿ.
ಹೊಸ ರೇಶನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ನೀಡಬೇಕಾದ ದಾಖಲೆಗಳು :-
- ಕುಟುಂಬ ಸದಸ್ಯರ ವಿವರ :- ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರು ಕುಟುಂಬದಲ್ಲಿ ಇರುವ ಎಲ್ಲ ಸದಸ್ಯರ ವಿವರಗಳನ್ನು ನೀಡಬೇಕು. ಕುಟುಂಬ ಸದಸ್ಯರ ಆಧಾರ್ ಕಾರ್ಡ್ ವಿವರಗಳು ಹಾಗೂ ವೋಟರ್ ಕಾರ್ಡ್ ವಿವರಗಳು ಹಾಗೂ ವಿಳಾಸದ ದಾಖಲೆಗಳನ್ನು ನೀಡಬೇಕು.
- ಭಾವಚಿತ್ರ :- ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕುಟುಂಬ ಸದಸ್ಯರ ಪಾಸ್ಪೋರ್ಟ್ ಅಳತೆಯ ಭಾವಚಿತ್ರವನ್ನು ನೀಡಬೇಕು.
- ಆದಾಯ ಪ್ರಮಾಣಪತ್ರ :- ಬಿಪಿಎಲ್ ಕಾರ್ಡ್ ಪಡೆಯಲು ಅರ್ಜಿದಾರರು ಕುಟುಂಬದ ಆದಾಯದ ವಿವರಗಳನ್ನು ಅಂದರೆ ವಾರ್ಷಿಕ ಆದಾಯ ಪ್ರಮಾಣ ಪತ್ರವನ್ನು ನೀಡಬೇಕು.
- ಜಾತಿ ಪ್ರಮಾಣಪತ್ರ :- ಅರ್ಜಿದಾರರು ಜಾತಿ ಪ್ರಮಾಣಪತ್ರವನ್ನು ನೀಡಬೇಕು.
ಇದನ್ನೂ ಓದಿ: ಸ್ವಂತ ಉದ್ಯೋಗ ಮಾಡುವವರಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಒಂದು ಲಕ್ಷ ರೂಪಾಯಿ ಸಾಲ ಸೌಲಭ್ಯ.